(ನ್ಯೂಸ್ ಕಡಬ)newskadaba.com ಪುತ್ತೂರು, ಜೂ. 17, ದ್ವಿತೀಯ ಪಿಯುಸಿ ಆಂಗ್ಲ ಭಾಷಾ ಪರೀಕ್ಷೆಯು ಜೂ.18ರಂದು ನಡೆಯಲಿದ್ದು, ಇದರ ಪ್ರಯುಕ್ತ ಕೆಎಸ್ಸಾರ್ಟಿಸಿ ನಿಗಮದ ಸಾರಿಗೆ ಸೌಲಭ್ಯವು ಉಚಿತವಾಗಿರುವುದರಿಂದ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ.
ಕೆಎಸ್ಸಾರ್ಟಿಸಿ ಬಸ್‌ಗಳು ಕಾರ್ಯಾಚರಿಸುವ ಮಾರ್ಗದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣವಾಗಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನಿಗದಿತ ಪರೀಕ್ಷಾ ಕೇಂದ್ರಗಳನ್ನು ತಲುಪಲು ಅನುಕೂಲವಾಗುವ ನಿಟ್ಟಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ನೀಡಲಾದ ಮಾರ್ಗದಲ್ಲಿ ನಿಗಮದ ಸಾರಿಗೆ ಸೌಲಭ್ಯ ಕಲ್ಪಿಸಲಾಗುವುದು. ಶಿಕ್ಷಣ ಇಲಾಖೆಯ ವತಿಯಿಂದ ನಿಯೋಜಿಸಲಾದ ನೋಡೆಲ್ ಅಧಿಕಾರಿಗಳ ಮಾರ್ಗದರ್ಶನದಂತೆ ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡು ಪರೀಕ್ಷಾ ಕೇಂದ್ರಗಳಿಗೆ ಪೂರ್ವಾಹ್ನದೊಳಗೆ ತಲುಪುವಂತೆ ಮತ್ತು ಪರೀಕ್ಷೆ ಮುಗಿದ ಬಳಿಕ ವಾಪಾಸ್ಸು ಹಿಂದಕ್ಕೆ ಕಾರ್ಯಾಚರಣೆ ಮಾಡಲು ನಿಗಮದ ವತಿಯಿಂದ ಕ್ರಮ ಕೈಗೊಳ್ಳಲಾಗಿದೆ ಎಂದು ಕೆಎಸ್ಸಾರ್ಟಿಸಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ನಾಗೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.