(ನ್ಯೂಸ್ ಕಡಬ)newskadaba.com ಮಂಗಳೂರು. ಜೂ. 18, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೊಂಕಿನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, 8 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 378ಕ್ಕೆ ಏರಿಕೆಯಾಗಿದೆ.
ಸೌದಿಯಿಂದ ಆಗಮಿಸಿದ್ದ 43 ಮತ್ತು 25 ವರ್ಷದ ವ್ಯಕ್ತಿಗಳನ್ನು ಕ್ವಾರಂಟೈನ್‌ನಲ್ಲಿರಿಸಲಾಗಿತ್ತು. ಅವರ ಗಂಟಲ ದ್ರವ ಮಾದರಿ ವರದಿ ಬಂದಿದ್ದು, ಸೋಂಕು ಇರುವುದು ದೃಢಪಟ್ಟಿದೆ. ಕ್ವಾರಂಟೈನ್‌ನಲ್ಲಿದ್ದ 30, 38 ವರ್ಷದ ಮಹಿಳೆ ಮತ್ತು 12 ವರ್ಷದ ಬಾಲಕಿಗೆ ಕೋವಿಡ್-19 ಸೋಂಕು ತಗುಲಿದೆ. ಕ್ವಾರಂಟೈನ್‌ನಲ್ಲಿದ್ದ 42 ವರ್ಷದ ವ್ಯಕ್ತಿ, ಮುಂಬಯಿಯಿಂದ ಆಗಮಿಸಿದ್ದ 60 ವರ್ಷದ ವ್ಯಕ್ತಿ ಮತ್ತು 35 ವರ್ಷದ ವ್ಯಕ್ತಿಗೆ ಸೋಂಕು ತಗುಲಿದೆ.
ಒಟ್ಟು 80 ಮಂದಿಯ ಗಂಟಲು ದ್ರವ ಮಾದರಿಯ ವರದಿ ಬಂದಿದ್ದು, 8 ಪಾಸಿಟಿವ್ ಪ್ರಕರಣ ಕಂಡು ಬಂದಿದೆ. 147 ಮಂದಿಯ ಗಂಟಲ ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸೋಂಕಿನಿಂದಾಗಿ ದಾಖಲಾಗಿರುವ 70 ವರ್ಷದ ವ್ಯಕ್ತಿಯೊಬ್ಬರ ಸ್ಥಿತಿ ಗಂಭೀರವಾಗಿದ್ದು, ಮಧುಮೇಹ ಹಾಗೂ ನ್ಯೂಮೋನಿಯದಿಂದ ಬಳಲುತ್ತಿರುವ ಇವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೋವಿಡ್-19 ದೃಢಪಟ್ಟು ಆಸ್ಪತ್ರೆಯಲ್ಲಿ ದಾಖಲಾಗಿರುವ 52 ವರ್ಷದ ಇನ್ನೊಬ್ಬ ವ್ಯಕ್ತಿಯು ಮಧುಮೇಹ ಮತ್ತು ಅರ್ಬುದ ರೋಗದಿಂದ ಬಳಲುತ್ತಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.