ಕೊರೊನಾ ಗೆಲ್ಲಲು ಮಾಸ್ಕ್ ಕಡ್ಡಾಯ➤ ಮಾಸ್ಕ್ ಡೇ ಗೆ ಬಿಎಸ್‍ವೈ ಚಾಲನೆ

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜೂ.18: ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮಾಸ್ಕ್ ಕಡ್ಡಾಯವಾಗಿ ಬಳಕೆ ಮಾಡಬೇಕು ಎಂದು ಜಾಗೃತಿ ಮೂಡಿಸುವ ಸಲುವಾಗಿ ಗುರುವಾರ ರಾಜ್ಯಾದ್ಯಂತ ಮಾಸ್ಕ್ ಡೇ ಗೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದರು.


ಮಾಸ್ಕ್ ಧರಿಸುವುದರಿಂದ ಕೊರೊನಾ ಗೆಲ್ಲಬಹುದು ಹಾಗಾಗಿ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು ಎಂಬ ಉದ್ದೇಶದಿಂದ ಇಂದು ಬೆಳಗ್ಗೆ ಬೆಂಗಳೂರಿನ ಕಬ್ಬನ್ ಪಾರ್ಕ್‍ನಲ್ಲಿ ಸಿಎಂ ಯೆಡಿಯೂರಪ್ಪ ಸಹಿತ ಸಾರ್ವಜನಿಕರು ಪಾದಯಾತ್ರೆ ಮಾಡಿದರು.


ಕಾರ್ಯಕ್ರಮದಲ್ಲಿ ಪ್ಲೆಕಾರ್ಡ್ ಹಿಡಿದು ಸಚಿವರು, ಆರೋಗ್ಯ ಅಧಿಕಾರಿಗಳು ಭಾಗಿಯಾದರು ಕೊರೊನಾ ಸೋಂಕು ನಿಯಂತ್ರಣ ಮಾಡುವ ಸಲುವಾಗಿ ಮಾಸ್ಕ್ ಕಡ್ಡಾಯವಾಗಿ ಬಳಕೆ ಮಾಡಬೇಕು ಹಾಗಾಗಿ ಇಂದು ರಾಜ್ಯಾದ್ಯಂತ ಮಾಸ್ಕ್ ಡೇ ಆಚರಿಸಲಾಗುತ್ತಿದೆ. ಮಾಸ್ಕ್ ಬಳಕೆಯಲ್ಲಿ ಜನರಲ್ಲಿ ಇನ್ನೂ ಅರಿವೂ ಮೂಡದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.

Also Read  ಶುಕ್ರವಾರ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ ➤ ಕೆಇಎ ಸ್ಪಷ್ಟನೆ

error: Content is protected !!
Scroll to Top