ಸುಳ್ಯ: ಮೂರನೇ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ)newskadaba.com ಸುಳ್ಯ. ಜೂ.18, ವಾರದ ಹಿಂದೆ ಮಹಾರಾಷ್ಟ್ರದಿಂದ ಬಂದು ಸುಳ್ಯದಲ್ಲಿ ಕ್ವಾರಂಟೈನ್ ನಲ್ಲಿದ್ದ ಅಜ್ಜಾವರ ಗ್ರಾಮದ ವ್ಯಕ್ತಿಯೊಬ್ಬರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.

ಈ ಮೂಲಕ ಸುಳ್ಯ ತಾಲೂಕಿನಲ್ಲಿ ಕೊರೋನಾ ಪ್ರಕರಣ ಮೂರಕ್ಕೆ ಏರಿಕೆಯಾಗಿದೆ. ಅಜ್ಜಾವರ ಗ್ರಾಮದ 30 ವರ್ಷ ವಯಸ್ಸಿನವರಾದ ಇವರು ಮಹಾರಾಷ್ಟ್ರದಿಂದ ಬಂದು ಶಾಲೆಯೊಂದರಲ್ಲಿ ಕ್ವಾರಂಟೈನ್ ನಲ್ಲಿದ್ದರು. ಇವರ ಗಂಟಲ ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಕೊರೋನಾ ಇರುವುದು ದೃಢಪಟ್ಟಿದೆ. ಅವರನ್ನು ಇದೀಗ ಮಂಗಳೂರು ಕೋವಿಡ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Scroll to Top