ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ತರಕಾರಿ ಟೆಂಪೋ ➤ ಸ್ಥಳದಲ್ಲೇ ಇಬ್ಬರ ದುರ್ಮರಣ..!!

(ನ್ಯೂಸ್ ಕಡಬ) newskadaba.com ಉಡುಪಿ, ಜೂ.18., ಕುಂದಾಪುರದಿಂದ ಉಡುಪಿಗೆ ತರಕಾರಿ ಹೊತ್ತು ತರುತ್ತಿದ್ದ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿಯ 66 ರ ಅಂಬಾಗಿಲು ಬಳಿ ಗುರುವಾರ ನಡೆದಿದೆ.


ಅಪಘಾತದ ರಭಸಕ್ಕೆ ಚಾಲಕ ಮತ್ತು ಸಹಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಉದ್ಯಾವರದಲ್ಲಿ ತರಕಾರಿ ವ್ಯಾಪಾರವನ್ನು ಮಾಡುತ್ತಿದ್ದ ದಿನೇಶ್ (35) ಮತ್ತು ಮಂಜು (30) ಮೃತಪಟ್ಟ ದುರ್ಧೈವಿಗಳು. ಕುಂದಾಪುರದಿಂದ ಉದ್ಯಾವರಕ್ಕೆ ಟೆಂಪೋ ಟ್ರಾಕ್ಸ್ ನಲ್ಲಿ ತರಕಾರಿ ಸಾಗಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದಿದೆ.

Also Read  ಹಳಿ ತಪ್ಪಿದ ಸಬರಮತಿ ಎಕ್ಸ್ ಪ್ರೆಸ್ ಪ್ಯಾಸೆಂಜರ್ ರೈಲಿನ 20 ಬೋಗಿಗಳು             ಪ್ರಯಾಣಿಕರ ಸ್ಥಳಾಂತರ                                                

ಇದೀಗ ಮೃತದೇಹಗಳನ್ನು ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಉಡುಪಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top