(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ.18, ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಗಳು ನಡೆಯದೇ ಇರುವ ಕಾರಣ ಐದು ವರ್ಷದ ಅವಧಿ ಪೂರ್ಣಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸಲು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಐದು ವರ್ಷದ ಅವಧಿಯನ್ನು ಮುಗಿಸಿದ ನಂತರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 8(1)(ಬಿ)ರಡಿ ಕಲಂ 321 ಅನ್ವಯ ಆಡಳಿತಾಧಿಕಾರಿಗಳನ್ನು ನೇಮಿಸಲು ಸರಕಾರವು ತಿಳಿಸಿದ್ದು, ಸಚಿವ ಸಂಪುಟದಲ್ಲೂ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಸರಕಾರವು ಪ್ರಕಟಣೆಯಲ್ಲಿ ತಿಳಿಸಿದೆ.