ಮಾಸ್ಕ್ ಧರಿಸದೆ ಓಡಾಡಿದರೆ ಎಚ್ಚರ ➤ ಉಡುಪಿಯಲ್ಲಿ 27,000 ರೂ. ದಂಡ ಸಂಗ್ರಹ

(ನ್ಯೂಸ್ ಕಡಬ) newskadaba.com  ಉಡುಪಿ ,ಜೂ.19:  ಜಿಲ್ಲೆಯಲ್ಲಿ ಸಾಕಷ್ಟು ಮಂದಿ ಮಾಸ್ಕ್ ಹಾಕದೆ ಹೊರಗಡೆ ಓಡಾಟ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಈವರೆಗೆ ಮಾಸ್ಕ್ ಹಾಕದವರಿಂದ ಸುಮಾರು 27,000 ರೂ.ವರೆಗೆ ದಂಡ ವಸೂಲಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮಾಸ್ಕ್ ಹಾಕದವರಿಗೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು. ಹಾಗೂ ದಂಡ ವಿಧಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

 

ಕೊರೋನಾ ವಿರುದ್ಧ ನಿರಂತರ ಹೋರಾಟ ಅಗತ್ಯವಾಗಿದೆ. ಈ ಹೋರಾಟ ಮುಗಿಯುವುದಿಲ್ಲ. ಈ ಹೋರಾಟದಲ್ಲಿ ಬಹಳ ಮುಖ್ಯವಾದ ಅಸ್ತ್ರ ಮಾಸ್ಕ್. ಮಾಸ್ಕ್ ಬಳಕೆಯಿಂದ ಶೇ.50ರಷ್ಟು ಸೋಂಕನ್ನು ಹರಡದಂತೆ ತಡೆಗಟ್ಟಬಹುದು. ಈ ಪ್ರಯೋಗ ಇತರ ರಾಷ್ಟ್ರಗಳಲ್ಲಿಯೂ ಯಶಸ್ವಿಯಾಗಿದೆ. ಆದುದರಿಂದ ಪ್ರತಿ ಯೊಬ್ಬರು ಹೊರಗಡೆ ಮಾಸ್ಕ್ ಇಲ್ಲದೆ ಬರಬಾರದು. ಮಾಸ್ಕ್ ಧರಿಸದೇ ಬಂದಲ್ಲಿ ನಿಮಗೂ ಮತ್ತು ಇತರರಿಗೂ ತೊಂದರೆಯಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Also Read  ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

 

error: Content is protected !!
Scroll to Top