ಚೀನಾ-ಭಾರತ ಸಂಘರ್ಷ ರಾಮಮಂದಿರ ನಿರ್ಮಾಣ ಯೋಜನೆ ರದ್ದು

(ನ್ಯೂಸ್ ಕಡಬ)newskadaba.com ಅಯೋಧ್ಯೆ, ಜೂನ್ 19, ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದವು ಬಹಳ ಗಂಭೀರವಾಗಿರುವ ಹಿನ್ನೆಲೆ ಅಯೋಧ್ಯೆಯಲ್ಲಿ ಆರಂಭವಾಗಬೇಕಾಗಿದ್ದ ರಾಮಮಂದಿರದ ಪುನರ್ನಿರ್ಮಾಣ ಕಾರ್ಯವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.

ಈ ಕುರಿತು ರಾಮಮಂದಿರದ ಟ್ರಸ್ಟ್ ಮಾಹಿತಿ ನೀಡಿದ್ದು, ದೇಶದ ರಕ್ಷಣೆ ಬಹಳ ಮುಖ್ಯವಾಗಿದೆ. ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಸೇನೆಯ ನಡುವೆ ಘರ್ಷಣೆ ಸಂಭವಿಸಿದ್ದು, ಈ ಘಟನೆಯಲ್ಲಿ 20 ಭಾರತೀಯ ಯೋಧರು ಹತರಾಗಿದ್ದಾರೆ, ಇಂತಹ ಸಂದರ್ಭದಲ್ಲಿ ರಾಮ ಮಂದಿರ ನಿರ್ಮಾಣ ಯೋಜನೆ ಆರಂಭಿಸುವುದು ಸೂಕ್ತವಲ್ಲ, ಸದ್ಯಕ್ಕೆ ರಾಮಮಂದಿರ ನಿರ್ಮಾಣ ಯೋಜನೆ ಇಲ್ಲ ಎಂದು ತಿಳಿಸಿದ್ದಾರೆ.

Also Read  ಹಾವು ಕಡಿತದಿಂದ ಮೃತಪಟ್ಟ ಅಣ್ಣನ ಅಂತ್ಯ ಸಂಸ್ಕಾರಕ್ಕೆ ಬಂದಿದ್ದ ತಮ್ಮನಿಗೂ ಹಾವು ಕಡಿತ- ಮೃತ್ಯು..!

ರಾಮಮಂದಿರ ನಿರ್ಮಾಣಕಾರ್ಯ ಪ್ರಾರಂಭದ ಬಗ್ಗೆ ದೇಶದ ಪರಿಸ್ಥಿತಿಗೆ ಅನುಗುಣವಾಗಿ ತೆಗೆದುಕೊಳ್ಳಲಾಗುವುದು ಮತ್ತು ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಹಾಗೆಯೇ ಜುಲೈ ಆರಂಭದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೂಮಿ ಪೂಜೆ ನಡೆಸಲಿದ್ದಾರೆ ಎನ್ನಲಾಗಿತ್ತು. ಈ ಸಂಬಂಧ ಎಲ್ಲ ತಯಾರಿ ಸಹ ನಡೆಯುತ್ತಿತ್ತು.

error: Content is protected !!
Scroll to Top