(ನ್ಯೂಸ್ ಕಡಬ) newskadaba.com ಕರಾವಳಿ,ಜೂ.19: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದ್ದು, ಒಂದೇ ದಿನ 13,586 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 336 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,80,532 ಏರಿಕೆಯಾಗಿದ್ದು, ಒಟ್ಟು 12,573 ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಸದ್ಯ 1,63,248 ಪ್ರಕರಣಗಳು ಸಕ್ರಿಯವಾಗಿದ್ದು, 2,04,711 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಕರುನಾಡಿನ ಪಾಲಿಗೆ ನಿನ್ನೆಯ (ಜೂನ್ 18) ದಿನ ಕರಾಳವಾಗಿದ್ದು, ಒಂದೇ ದಿನ 12 ಮಂದಿ ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ. ಇದೇ ಸಂದರ್ಭ 210 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 7,944ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 114ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬಳ್ಳಾರಿ 48, ಕಲಬುರಗಿ 48, ದಕ್ಷಿಣ ಕನ್ನಡ 23, ರಾಮನಗರ 21, ಬೆಂಗಳೂರು ನಗರ 17, ಯಾದಗಿರಿ 8, ಮಂಡ್ಯ 7,
ಬೀದರ್ 6, ಗದಗ 5, ಹಾಸನ, ಧಾರವಾಡ ಮತ್ತು ರಾಯಚೂರಿನಲ್ಲಿ ತಲಾ 4, ದಾವಣಗೆರೆ ಮತ್ತು ಚಿಕ್ಕಮಗಳೂರಿನಲ್ಲಿ ತಲಾ 3, ವಿಜಯಪುರ,ಉತ್ತರ ಕನ್ನಡ ಮತ್ತು ಮೈಸೂರಿನಲ್ಲಿ ತಲಾ 2, ಬಾಗಲಕೋಟೆ, ಶಿವಮೊಗ್ಗ ಮತ್ತು ಕೊಪ್ಪಳದಲ್ಲಿ ತಲಾ ಒಂದು ಪ್ರಕರಣ ಪಾಸಿಟಿವ್ ಬಂದಿದೆ. ಒಟ್ಟಾರೆ ರಾಜ್ಯದಲ್ಲಿ 7,944 ಕೊರೊನಾ ಸೋಂಕಿತರ ಪೈಕಿ 4,983 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ.ಇದರಲ್ಲಿ ಇಂದು 179 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಉಳಿದಂತೆ ಇದುವರೆಗೆ 114 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 2843 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.