ಮಾಂಸದಂಗಡಿ ಮಾಲೀಕನ ಮೇಲೆ ತಲವಾರು ದಾಳಿ ಪ್ರಕರಣ ➤ ಮೂವರು ಶಂಕಿತ ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ,ಜೂ.19: ತೊಕ್ಕೊಟ್ಟು ಒಳಪೇಟೆಯಲ್ಲಿ ಗುರುವಾರ ತಡರಾತ್ರಿ ಮಾಂಸದಂಗಡಿ ನಡೆಸುತ್ತಿದ್ದ ವ್ಯಕ್ತಿಯ ಮೇಲೆ ತಲವಾರು ದಾಳಿ ನಡೆಸಿ ಹತ್ಯೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಶಂಕಿತ ಮೂವರನ್ನು ಉಳ್ಳಾಲ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.


ಉಳ್ಳಾಲ ಭಾಗದಲ್ಲಿ ಹಲವು ಕಡೆ ಮಾಂಸದಂಗಡಿ ಹೊಂದಿದ್ದ ಹಳೆಕೋಟೆ ನಿವಾಸಿ ನಝೀರ್(47) ತೊಕ್ಕೊಟ್ಟು ಒಳಪೇಟೆಯತ್ತ ಬೀಡಾ ತಿನ್ನಲು ಬಂದಾಗ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಇವರ ಮೇಲೆ ತಲವಾರು ದಾಳಿ ನಡೆಸಿದ್ದರು. ಇದೀಗ ತಲವಾರು ದಾಳಿ ನಡೆಸಿದ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಕೌಟುಂಬಿಕ ಕಲಹವೇ ಕಾರಣ ಎನ್ನಲಾಗಿದೆ.

Also Read  ಪ್ರಗತಿ ಪರಿಶೀಲನಾ ಸಭೆ ಮುಂದೂಡಿಕೆ

error: Content is protected !!
Scroll to Top