ಉಡುಪಿಯಲ್ಲಿಂದು ಕೊರೋನಾಗೆ ಎರಡನೇ ಬಲಿ

(ನ್ಯೂಸ್ ಕಡಬ)newskadaba.com ಉಡುಪಿ, ಜೂ.19, ಮಹಾರಾಷ್ಟ್ರದಿಂದ ಬಂದು ಹೋಂ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೋರ್ವರು ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಇಂದು ಸಂಜೆ ಕುಂದಾಪುರದ ತೆಕ್ಕಟ್ಟೆ ಎಂಬಲ್ಲಿ ನಡೆದಿದೆ.

54 ವರ್ಷ ಪ್ರಾಯದ ಈ ವ್ಯಕ್ತಿ ಕಳೆದ ವಾರ ಮಹಾರಾಷ್ಟ್ರದಿಂದ ಊರಿಗೆ ವಾಪಸ್ ಆಗಿದ್ದರು ಎನ್ನಲಾಗಿದೆ. ಜಿಲ್ಲಾಡಳಿತ ಅವರನ್ನು ಹೋಂ ಕ್ವಾರಂಟೈನ್ ನಲ್ಲಿರಿಸಿತ್ತಾದರೂ ಅವರಲ್ಲಿ ಉಸಿರಾಟದ ಸಮಸ್ಯೆ ಕಂಡುಬಂದಿದ್ದು, ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈ ಮೂಲಕ ಮಾರಕ ಕೊರೋನಾ ಗೆ ಇಬ್ಬರು ಬಲಿಯಾದಂತಾಗಿದೆ.

Also Read  ಫೆ.21ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಳ್ಳಾರಿ ಭೇಟಿ ➤ ಸಚಿವ ಶ್ರೀರಾಮುಲು

error: Content is protected !!
Scroll to Top