(ನ್ಯೂಸ್ ಕಡಬ) newskadaba.com ನವದೆಹಲಿ ,ಜೂ.20: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆ ಆಗುತ್ತಿದ್ದರೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಮಾತ್ರ ಕಡಿಮೆ ಮಾಡುತ್ತಿಲ್ಲ. ಸತತ ಎರಡು ವಾರಗಳ ಕಾಲ ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆ ಕಂಡಿದೆ.
ನಿರಂತರವಾಗಿ ಕಳೆದ 14 ದಿನಗಳಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಾಗುತ್ತಿದ್ದು ಶನಿವಾರ ಲೀಟರ್ ಪೆಟ್ರೋಲ್ ಗೆ 51 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಗೆ 61 ಪೈಸೆ ಹೆಚ್ಚಳ ಮಾಡಲಾಗಿದೆ. ಕಳೆದ 14 ದಿನಗಳಲ್ಲಿ ಒಟ್ಟು ಪೆಟ್ರೋಲ್ ಮೇಲೆ ಪ್ರತಿ ಲೀಟರ್ ಗೆ 7.62 ರೂಪಾಯಿ ಹೆಚ್ಚಳ ಮಾಡಲಾಗಿದೆ. ಡೀಸೆಲ್ ಮೇಲೆ ಪ್ರತಿ ಲೀಟರ್ ಗೆ 8.28 ರೂಪಾಯಿ ಹೆಚ್ಚಳ ಮಾಡಲಾಗಿದೆ.