ಅಕ್ರಮ ಎಸಗಿದ ವೆಬ್ಸೈಟ್ಗೆ ಕುಕ್ಕೆ ದೇವಳ ಆನ್ಲೈನ್ ಸೇವೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ,ಜೂ.20:  ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಹೆಸರಿನಲ್ಲಿ ಅಕ್ರಮ ವೆಬ್ಸೈಟ್ ಮೂಲಕ ಆನ್ಲೈನ್ ಸೇವೆ ಬುಕ್ಮಾಡುತ್ತಿದ್ದ ಹಾಗೂ ಈಗ ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ .ಸಂಸ್ಥೆಗೆ ರಾಜ್ಯ ಸರ್ಕಾರ, ದೇವಸ್ಥಾನಗಳ ಆನ್ಲೈನ್ ಸೇವೆ ನಡೆಸಲು ಅವಕಾಶ ನೀಡಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.

 

ವ್ಯಕ್ತಿಯೊಬ್ಬರು ನಿರ್ವಹಿಸುತಿರುವ ವೆಬ್ಸೈಟ್ ಸುಬ್ರಹ್ಮಣ್ಯದಲ್ಲಿ ನಡೆಸಲಾಗುತ್ತಿರುವ ಸೇವೆಗಳನ್ನು ಅಕ್ರಮವಾಗಿ ಬುಕ್ ಮಾಡಿ ದೇವಸ್ಥಾನಕ್ಕೆ ವಂಚನೆ ನಡೆಸುತ್ತಿದ್ದು, ಇದು ಸೇರಿದಂತೆ ಮೂರು ವೆಬ್ಸೈಟ್ಗಳ ವಿರುದ್ಧ ಈ ಹಿಂದೆ ಪ್ರಕರಣ ದಾಖಲಿಸಲಾಗಿತ್ತು. 2018 ಅ.16ರಂದು ಕುಕ್ಕೆ ಸುಬ್ರಹ್ಮಣ್ಯದ ಕಾರ್ಯನಿರ್ವಹಣಾಧಿಕಾರಿ, ಸೈಬರ್ ಕ್ರೈಂ ವಿಭಾಗಕ್ಕೆ ಮೂರು ವೆಬ್ಸೈಟ್ಗಳ ವಿರುದ್ಧ ದೂರು ದಾಖಲಿಸಿದ್ದರು. ಪ್ರಕರಣ ಈಗ ಹೈಕೋರ್ಟ್ನಲ್ಲಿದ್ದು, ಆರೋಪಿ ಸ್ಥಾನದಲ್ಲಿರುವ ಅರ್ಜುನ್ ರಂಗಾ ವಿರುದ್ಧದ ಕ್ರಮಕ್ಕೆ ಕೋರ್ಟ್ ತಡೆಯಾಜ್ಞೆ ನೀಡಿದೆ.ಲಾಕ್ಡೌನ್ ಸಮಯದಲ್ಲಿ ಭಕ್ತರಿಗೆ ಪ್ರಮುಖ ಕ್ಷೇತ್ರಗಳ ದೇವರ ದರ್ಶನಕ್ಕೆ ಆನ್ಲೈನ್ ಮೂಲಕ ವ್ಯವಸ್ಥೆ ಮಾಡುವ ಯೋಜನೆ ಜಾರಿಗೆ ತಂದಿದ್ದು, ಈ ಆನ್ಲೈನ್ ವ್ಯವಸ್ಥೆಯನ್ನು ನಿರ್ವಹಿಸುವ ಜವಾಬ್ದಾರಿಯನ್ನು, ಇದೇ ಕಂಪನಿಗೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.

Also Read  ತಂದೆ ತಿಥಿಯ ದಿನವೇ ಸಿಲಿಂಡರ್ ಸ್ಫೋಟಗೊಂಡು ಮಗಳು ಮೃತ್ಯು..!

 

error: Content is protected !!
Scroll to Top