(ನ್ಯೂಸ್ ಕಡಬ)newskadaba.com ಮೈಸೂರು, ಜೂ.20, ಕುವೆಂಪುನಗರದಲ್ಲಿರುವ ಮೆಗಾ ಮೆಡಿಕಲ್ಸ್ ನ ಬಹುಮಹಡಿ ಕಟ್ಟಡದಲ್ಲಿ ಶನಿವಾರ ನಸುಕಿನ ಜಾವ ಅಗ್ನಿ ಅನಾಹುತ ಸಂಭವಿಸಿದೆ.
ಕಟ್ಟಡದಲ್ಲಿ ನಸುಕಿನ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, 9 ಅಗ್ನಿಶಾಮಕ ವಾಹನಗಳನ್ನು ಕಾರ್ಯಾಚರಣೆಗೆ ಬಳಕೆ ಮಾಡಿಕೊಳ್ಳಲಾಯಿತು. 60 ಮಂದಿ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ. ಘಟನೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಬೆಳಿಗ್ಗೆಯಷ್ಟೇ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ನಷ್ಟದ ಅಂದಾಜು ಇನ್ನಷ್ಟೇ ತಿಳಿಯಬೇಕಿದೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ರಾಜು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳಾದ ರಾಜು, ನವೀನ್, ಗಂಗಾನಾಯಕ ಹಾಗೂ ಭರತ್ ಕುಮಾರ್, ಠಾಣಾಧಿಕಾರಿಗಳಾದ ಗಂಗಾಧರ, ನಾಗರಾಜು ಅರಸ್, ಶಿವಸ್ವಾಮಿ ಹಾಗೂ ಸಿಬ್ಬಂದಿ ಭಾಗಿಯಾಗಿದ್ದರು.