ಉಡುಪಿ: ಶನಿವಾರ 13 ಮಂದಿಗೆ ಕೊರೋನ ಪಾಸಿಟಿವ್

ಉಡುಪಿ, ಜೂ.20: ಜಿಲ್ಲೆಯಲ್ಲಿ ಇಂದು ಒಂದೇ ದಿನ 13 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1,063ಕ್ಕೆ ಏರಿಕೆಯಾಗಿದೆ.

ಶುಕ್ರವಾರ ಜಿಲ್ಲೆಯಲ್ಲಿ 11 ಜನರಿಗೆ ಸೋಂಕು ದೃಢವಾಗಿದ್ದು, ತೆಕ್ಕಟ್ಟೆಯ ಓರ್ವ ವ್ಯಕ್ತಿ ಮಹಾರಾಷ್ಟ್ರದಿಂದ ಬಂದ 4 ಗಂಟೆಯಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದು ಶನಿವಾರ ಅವರ ಪತ್ನಿ ಹಾಗೂ ಪುತ್ರಿಗೆ ಸೋಂಕು ದೃಢ ಪಟ್ಟಿದ್ದು, ಸದ್ಯ ಅವರನ್ನು ಜಿಲ್ಲೆಯ ಕೋವಿಡ್ ಆಸ್ಪತ್ರೆಗೆ ಸೇರಿಸಲಾಗಿದೆ.

ಇಂದು ಜಿಲ್ಲೆಯಲ್ಲಿ ಒಂಬತ್ತು ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು ಇದರೊಂದಿಗೆ ಒಟ್ಟು 953 ಮಂದಿ ಬಿಡುಗಡೆಯಾಗಿದ್ದಾರೆ, ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು ಸದ್ಯ ಜಿಲ್ಲೆಯಲ್ಲಿ 108 ಪ್ರಕರಣಗಳು ಸಕ್ರಿಯವಾಗಿವೆ.

error: Content is protected !!

Join the Group

Join WhatsApp Group