ಕಡೇಶ್ವಾಲ್ಯ ಬೆಂಕಿ ಅವಘಡಕ್ಕೆ ತುತ್ತಾಗಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com.ಬಂಟ್ಚಾಳ,ಜೂ.21:ಬೆಂಕಿ ತಗುಲಿ ಸುಟ್ಟ ಗಾಯಗೊಂಡಿದ್ದ ಕಡೇಶ್ವಾಲ್ಯ ಗ್ರಾಮದ ನೆತ್ತರಮನೆ ನಿವಾಸಿ ಮಹಿಳೆ ಹರಿಣಾಕ್ಷಿ(35) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ  ನಡೆದಿದೆ.


ಜೂ. 2 ರಂದು ಮನೆಯಲ್ಲಿ ಗ್ಯಾಸ್ ಖಾಲಿಯಾದ ಹಿನ್ನೆಯಲ್ಲಿ ಕಟ್ಟಿಗೆಯ ಒಲೆಯಲ್ಲಿ ತಿಂಡಿ ಮಾಡುತ್ತಿದ್ದ ವೇಳೆ ಬೆಂಕಿ ಆಕಸ್ಮಿಕವಾಗಿ ಅವರು ಧರಿಸದ್ದ ಬಟ್ಟೆಗೆ ತಗುಲಿತ್ತು ಇದರಿಂದ ದೇಹಕ್ಕೆ ತೀವ್ರ ಸುಟ್ಟಗಾಯಗಳಾಗಿತ್ತು. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು ಆದರೆ ಮತ್ತೆಗಾಯ ಉಲ್ಬಣಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top