ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವಂತೆ ಜಿಲ್ಲಾಧಿಕಾರಿ ಸಿಂಧೂ.ಬಿ ರೂಪೇಶ್ ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ.21, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಪ್ರತೀ ವರ್ಷದಂತೆ ಈ ವರ್ಷವೂ ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳುವ ಜೊತೆಗೆ ಕೋವಿಡ್ –19 ವೈರಸ್‍ನಿಂದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕಾಪಾಡುವ ದೃಷ್ಠಿಯಿಂದ ಪ್ರತೀ ಕೇಂದ್ರದ ಪ್ರತಿಯೊಂದು ಕೊಠಡಿಗಳನ್ನು ನಿತ್ಯವೂ ಸ್ಯಾನಿಟೈಸರ್ ಮಾಡುವುದು ಕಡ್ಡಾಯವಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ಕೌಂಟರ್ ಸ್ಥಾಪಿಸಿ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನ್ ಮೂಲಕ ಪರೀಕ್ಷಿಸಿ ನಂತರದಲ್ಲಿ ಕೊಠಡಿಗೆ ತೆರಳಲು ಅವಕಾಶ ಮಾಡಿ ಕೋಡಬೇಕು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಹೇಳಿದ್ದಾರೆ.

ನಗರದ ಕಪಿತಾನಿಯೋ ಪ್ರೌಢ ಶಾಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವ ಸಿದ್ಧತೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಪೂರ್ವ ಸಿಧ್ದತೆ ಕ್ರಮಗಳ ಕರಪತ್ರ ಬಿಡುಗಡೆಗೊಳಿಸಿದ ಸಂದರ್ಭದಲ್ಲಿ ಮಾತನಾಡಿದರು.

ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೊಷಕರು ಯಾವುದೇ ಭಯ ಪಡುವ ಅಗತ್ಯವಿಲ್ಲ. ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಿದ್ಧತೆಗಳನ್ನು ಈಗಾಗಲೇ ಕೈಗೊಂಡಿದ್ದು, ಜಿಲ್ಲೆಯ ಪ್ರತಿಯೊಬ್ಬ ವಿದ್ಯಾರ್ಥಿಯೂ ಪರೀಕ್ಷೆಗೆ ಹಾಜರಾಗಬೇಕು. ಪರೀಕ್ಷೆಗೆ ಹಾಜರಾಗುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಊಟ ಮತ್ತು ನೀರನ್ನು ಕಡ್ಡಾಯ ತೆಗೆದುಕೊಂಡು ಬರುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಅಂತರವನ್ನು ಪಾಲಿಸುವ ಜೊತೆಗೆ ಕೋವಿಡ್ – 19 ಮಾರ್ಗಸೂಚಿಗಳನ್ನು ಅನುಸರಿಸಬೇಕೆಂದರು.

Also Read  ಅಕ್ಟೋಬರ್ 17ರಂದು ವಾಲ್ಮೀಕಿ ಜಯಂತಿ

ಯಾವುದೇ ವಿದ್ಯಾರ್ಥಿಗೆ ಕೆಮ್ಮು, ಶೀತ, ನೆಗಡಿ ಸೇರಿದಂತೆ ವೈರಸ್ ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಸ್ಥಳೀಯ ವೈದ್ಯಾಧಿಕಾರಿಗಳ ದೃಢೀಕರಣದೊಂದಿಗೆ ಸಂಬಂಧಿಸಿದ ವಿದ್ಯಾರ್ಥಿಯನ್ನು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು, ಇದರ ಸಂಪೂರ್ಣ ಜವಾಬ್ದಾರಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರದ್ದು ಆಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಸಭೆಯಲ್ಲಿ ಡಿಡಿಪಿಐ ಮಲೇಶ್ ಸ್ವಾಮಿ, ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು, ಶಿಕ್ಷಕರು ಮತ್ತಿತರರು ಉಪಸ್ಥಿತರಿದ್ದರು.

Also Read  ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟ ► ಇಬ್ಬರು ಗಂಭೀರ

error: Content is protected !!
Scroll to Top