ಕ್ವಾರಂಟೈನ್ ನಲ್ಲಿರುವವರ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಅವಕಾಶವಿಲ್ಲ..! ➤ ಶಿಕ್ಷಣ ಸಚಿವ ಸುರೇಶ್ ಕುಮಾರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ. 21, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದೇ ಆದರೂ ಈ ಮಧ್ಯೆ ಪೋಷಕರು ವಿರೋಧವನ್ನು ಕೂಡಾ ವ್ಯಕ್ತಪಡಿಸಿದ್ದರು. ಈ ನಡುವೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದು, ಕ್ವಾರಂಟೈನ್ ನಲ್ಲಿರುವವರ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಲ್ಲ ಎಂದು ಹೇಳಿದ್ದಾರೆ.

 

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಅಥವಾ ಅವರ ತಂದೆ-ತಾಯಿ, ಪೋಷಕರು ಮತ್ತು ಜೊತೆಗೆ ವಾಸಿಸುತ್ತಿರುವವರು ಕ್ವಾರಂಟೈನ್ ನಲ್ಲಿದ್ದರೆ ಅಂತಹ ಮಕ್ಕಳಿಗೆ ಪರೀಕ್ಷೆಗೆ ಅವಕಾಶವಿರುವುದಿಲ್ಲ ಎಂದು ಹೇಳಿದ್ದಾರೆ.

ಕ್ವಾರೆಂಟೈನ್ ನಲ್ಲಿರುವ ಮಕ್ಕಳಿಗೆ ಪೂರಕ ಪರೀಕ್ಷೆ ವೇಳೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಪರೀಕ್ಷೆಗೆ ಮೂರು ದಿನದವರೆಗೂ ಪರೀಕ್ಷಾ ಕೇಂದ್ರಗಳ ಬದಲಾವಣೆ ಆಯ್ಕೆಯ ಅವಕಾಶ ಇಟ್ಟುಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ನೂಕು ನುಗ್ಗಲು ತಡೆಯುವ ಉದ್ದೇಶದಿಂದ ಎಲ್ಲ ಸಿಬ್ಬಂದಿ ಬೆಳಗ್ಗೆ 7 ಗಂಟೆಗೆ ಪರೀಕ್ಷಾ ಕೇಂದ್ರಕ್ಕೆ ಆಗಮಿಸಲು ಸೂಚಿಸಲಾಗಿದ್ದು, ಮಕ್ಕಳ ತಪಾಸಣೆ ನಡೆಸಿದ ನಂತರವೇ ಪರೀಕ್ಷಾ ಕೊಠಡಿಗೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.

Also Read  ಎಫ್.ಐ.ಆರ್ ದಾಖಲಿಸಲು ಒಂದು ಲಕ್ಷ ರೂ. ಬೇಡಿಕೆ ➤ ಎಸ್.ಐ ಹಾಗೂ ಹೆಡ್ ಕಾನ್ಸ್‌ಟೇಬಲ್ ಎಸಿಬಿ ಬಲೆಗೆ..!

error: Content is protected !!
Scroll to Top