ಬೈಕ್ ಸ್ಟಂಟ್ ಮಾಡಿ ಪ್ರಾಣ ಕಳೆದುಕೊಂಡ ಮೂವರು ಯುವಕರು

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜೂ.21:ಬೆಳ್ಳಂಬೆಳಗ್ಗೆ ಬೈಕ್‍ನಲ್ಲಿ ಸ್ಟಂಟ್ ಮಾಡಲು ಹೋಗಿ ಮೂವರು ಯುವಕರು ಮೃತಪಟ್ಟ ಘಟನೆ ಯಲಹಂಕ ಸಮೀಪ ವಿಮಾನ ನಿಲ್ದಾಣ ರಸ್ತೆಯಲ್ಲಿ ನಡೆದಿದೆ.


ಇಂದು ಬೆಳಗ್ಗೆ ರಸ್ತೆ ಖಾಲಿಯಿದೆ ಎಂದು ಬೈಕ್‍ನಲ್ಲಿ ಹೊರಟ ಯುವಕರು ಹುರುಪಿನಿಂದ ಸ್ಟಂಟ್ ಮಾಡಿದ್ದಾರೆ. ಈ ಸಂದರ್ಭ ಸ್ಕಿಡ್ ಆಗಿ ಬಿದ್ದು ಮೃತಪಟ್ಟಿದ್ದಾರೆ. ಮೃತರು ಬೆಂಗಳೂರಿನ ಗೋವಿಂದಪುರ ಪ್ರದೇಶದವರು ಎಂದು ತಿಳಿದು ಬಂದಿದೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

error: Content is protected !!
Scroll to Top