(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.05, ಬಿಜೆಪಿ ಕಾರ್ಯಕರ್ತರು ಮಂಗಳೂರು ಚಲೋ ಬೈಕ್ ರ್ಯಾಲಿಯನ್ನು ಸೋಮವಾರ ಹಮ್ಮಿಕೊಂಡಿದ್ದು, ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಕಾನೂನು, ನಿಯಮಗಳನ್ನು ಉಲ್ಲಂಘಿಸಿ ಹೆಲ್ಮೆಟ್ ಧರಿಸದೆ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.
ಈಗಾಗಲೇ ಬೈಕ್’ನಲ್ಲಿ ಪ್ರಯಾಣಿಸುವ ಇಬ್ಬರೂ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕೆಂಬ ಕಾನೂನು ಜಾರಿಗೊಳಿಸಲಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಬಿಜೆಪಿ ಕಾರ್ಯಕರ್ತರು ಹೆಲಮೆಟ್ ಧರಿಸದೆ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ.
ರ್ಯಾಲಿ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಇನ್ನು ಹಲವವಾರು ಕಡೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.