ಕರಾವಳಿಯಲ್ಲಿ ವರುಣನ ಆರ್ಭಟ ➤ ಜೂ.23 ಮತ್ತು 24 ರಂದು ಆರೆಂಜ್ ಅಲರ್ಟ್



(ನ್ಯೂಸ್ ಕಡಬ)newskadaba.com ಮಂಗಳೂರು, ಜೂ. 22, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜೂ. 23 ಮತ್ತು 24 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.







ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು, ಇನ್ನು 5 ದಿನಗಳ ಇದೇ ರೀತಿ ಮುಂದುವರಿಯಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆಯ ಪ್ರಕಾರ ಈ 5 ದಿನಗಳ ಕಾಲ ಸರಾಸರಿ 65 ಮಿ.ಮೀ.ಗಿಂತ ಹೆಚ್ಚು ಮಳೆಯಾಗುತ್ತದೆ ಎಂದು ಹೇಳಿದೆ.






error: Content is protected !!
Scroll to Top