ಹೂಹಾಕುವಕಲ್ಲು: ಟ್ರ್ಯಾಕ್ಟರ್ ನಡಿಗೆ ಸಿಲುಕಿ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.22: ಬೈಕ್ ಗೆ ಟ್ರ್ಯಾಕ್ಟರ್‍ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಪರಿಣಾಮ ಬೈಕ್ ಸವಾರ ಟ್ರ್ಯಾಕ್ಟರ್ ನಡಿಗೆ ಸಿಲುಕಿ ದಾರುಣವಾಗಿ ಮೃತ ಪಟ್ಟ ಘಟನೆ ಕೊಣಾಜೆ ಪೊಲೀಸ್ ಠಾಣೇ ವ್ಯಾಪ್ತಿಯ ಹೂ ಹಾಕುವ ಕಲ್ಲು ಪುಣ್ಯಕೋಟಿ ನಗರದ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ.

 

ಮೃತ ಬೈಕ್ ಸವಾರ ಅಧೇ ಟ್ರ್ಯಾಕ್ಟರ್ ಚಾಲಕನಾಗಿದ್ದು, ಸೋಮವಾರ ರಜೆ ತೆಗೆದುಕೊಂಡಿದ್ದು, ಬದಲಿ ಚಾಲಕನನ್ನು, ಕರೆಸಿಕೊಂಡಿದ್ದರು. ಮನೆಯೊಂದರ ರಸ್ತೆ ಅಗೆಯುವ ಕೆಲಸ ನಿರ್ವಹಿಸಿದ ಬದಲಿ ಚಾಲಕ ಒಳರಸ್ತೆಯಿಂದ ಮುಡಿಪು ಮಂಜನಾಡಿ ಸಂಪರ್ಕ ರಸ್ತೆಗೆ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದಂತೆಯೇ ಅದೇ ರಸ್ತೆಯಲ್ಲಿ ಬರುತ್ತಿದ್ದ ಬೈಕ್ ಗೆ ಢಿಕ್ಕಿಯಾಗಿದೆಯೆನ್ನಲಾಗಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು, ನಿಯಂತ್ರಣಕ್ಕೆ ಬಾರದ ಟ್ರ್ಯಾಕ್ಟರ್ ಬೈಕ್ ಸವಾರನ ತಲೆಯ ಮೇಲೆ ಚಲಿಸಿದ್ದು ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಕೊಣಾಜೆ ಹಾಗೂ ಮಂಗಳೂರು ದಕ್ಷಿಣ ಸಂಚಾರಿ  ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Also Read  "ಸಾಹಸ ಪ್ರವಾಸೋದ್ಯಮ" ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಕುತ್ಲೂರಿನ ಮೂವರಿಗೆ ಗೌರವ ಸಮರ್ಪಣೆ

 

error: Content is protected !!
Scroll to Top