ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಅಟ್ಟಹಾಸ ➤ ಕೆಲ ಪ್ರದೇಶ ಮತ್ತೆ ಲಾಕ್ಡೌನ್..?

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ.22, ಬೆಂಗಳೂರಿನಲ್ಲಿ ಕೊರೋನಾ ಸೋಂಕು ಮಿತಿ ಮೀರಿ ಹರಡುತ್ತಿದ್ದು, ಸಮುದಾಯಕ್ಕೆ ಹಬ್ಬುವುದನ್ನು ತಪ್ಪಿಸಲು ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಲಾಕ್‍ಡೌನ್ ಬಿಗಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಬೆಂಗಳೂರು ನಗರದ ಸಚಿವರು, ಬಿಬಿಎಂಪಿ ಮತ್ತು ಬೆಂಗಳೂರು ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು. ಬೆಂಗಳೂರಿನಲ್ಲಿ ದಿನೇದಿನೇ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಬಗ್ಗೆ ಆತಂಕಗಳು ಕೇಳಿಬಂದಿದ್ದು, ಈಗಲೇ ಎಚ್ಚೆತ್ತುಕೊಳ್ಳದೇ ಇದ್ದರೆ ಸೋಂಕು ಸಮುದಾಯಕ್ಕೆ ಹರಡುವ ಸಾಧ್ಯತೆಯಿದೆ. ಮುಂಜಾಗ್ರತೆ ತೆಗೆದುಕೊಳ್ಳಲೇಬೇಕೆಂದು ಅಧಿಕಾರಿಗಳು ಸಭೆಯಲ್ಲಿ ಸಲಹೆ ನೀಡಿದರು. ನಂತರ ತೆಗೆದುಕೊಂಡ ತೀರ್ಮಾನದಲ್ಲಿ ಜಯನಗರ, ಬಸವನಗುಡಿ, ಶಿವಾಜಿನಗರ, ಚಾಮರಾಜಪೇಟೆ, ಚಿಕ್ಕಪೇಟೆ, ರಾಜಾಜಿನಗರ, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರಗಳಲ್ಲಿ ಲಾಕ್‍ಡೌನ್ ಬಿಗಿಗೊಳಿಸಲಾಗುವುದು ಎಂದಿದ್ದಾರೆ.

Also Read  ಮದುವೆಯ ವಿಳಂಬ ವಿಷಯದಲ್ಲಿ ಪರಿಹಾರಗಳು

ಸಂಪೂರ್ಣ ಲಾಕ್‍ಡೌನ್‍ನಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿದ್ದರೂ ಜನರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕಾಗಿ ಲಾಕ್‍ಡೌನ್ ಸಡಿಲ ಮಾಡಲಾಗಿತ್ತು. ಆದರೆ ಜನ ಅದನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವಲ್ಲಿ ನಿರ್ಲಕ್ಷ್ಯತೆ ತೋರಿಸಿದರು.
ಹಾಗಾಗಿ ಸೋಂಕು ಮಿತಿಮೀತಿ ಬೆಳೆಯುತ್ತಿದೆ. ಈಗಲೂ ಎಚ್ಚೆತ್ತುಕೊಳ್ಳದಿದ್ದರೆ ಪರಿಸ್ಥಿತಿ ಕೈ ಮೀರಿ ಹೋಗಲಿದೆ ಎಂಬ ಆತಂಕ ವ್ಯಕ್ತವಾಗಿದೆ. ಈ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆ 7ರಿಂದ 10 ಗಂಟೆವರೆಗೆ ಕೇವಲ ಮೂರು ಗಂಟೆಗಳ ಕಾಲ ಹಾಲು, ತರಕಾರಿ, ದಿನಸಿಯಂತಹ ಅಗತ್ಯ ವಸ್ತುಗಳ ಖರೀದಿಗಾಗಿ ಲಾಕ್‍ಡೌನ್‍ನ್ನು ಸಡಿಲಗೊಳಿಸಲಾಗುತ್ತದೆ. ಉಳಿದಂತೆ ಬಿಗಿಯಾದ ಲಾಕ್‍ಡೌನ್ ಜಾರಿಗೊಳಿಸಲಾಗುತ್ತದೆ.

error: Content is protected !!
Scroll to Top