ಮಡಿಕೇರಿ : ಕೊಡಗಿನಲ್ಲಿ ಮತ್ತಿಬ್ಬರಿಗೆ ಕೊರೊನಾ

(ನ್ಯೂಸ್ ಕಡಬ) newskadaba.com ಮಡಿಕೇರಿ,ಜೂ.22: ಮುಂಬೈನಿಂದ ಬಂದಿದ್ದ ವ್ಯಕ್ತಿ ಹಾಗೂ ಕೊಡಗಿನ ಸೋಮವಾರಪೇಟೆ ಸಮೀಪದ ನಿವಾಸಿಗೆ ಕೊರೊನಾ ಸೋಂಕು ತಗುಲಿದೆ ಎಂದು ಡಿಎಚ್ಓ ಮೋಹನ್ ಸ್ಪಷ್ಟಪಡಿಸಿದ್ದಾರೆ.

 

ಸೋಂಕಿತರು ವಾಸವಾಗಿದ್ದ ಗ್ರಾಮವನ್ನು ಜಿಲ್ಲಾಡಳಿತ ಸೀಲ್ಡೌನ್ ಮಾಡಿದೆ. ಗದಗ ಜಿಲ್ಲೆಗೆ ಹೋಗಿ ಬಂದಿದ್ದ ವ್ಯಕ್ತಿ ಬಳಿಕ ಗ್ರಾಮದಲ್ಲಿ ಓಡಾಡಿದ್ದಾನೆ ಎನ್ನಲಾಗಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಗ್ರಾಮವನ್ನು ಸೀಲ್ಡೌನ್ ಮಾಡಿದೆ. ಮುಂಬೈನಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಖಚಿತವಾಗಿದೆ. ಸೋಂಕಿತರಿಬ್ಬರನ್ನು ಮಡಿಕೇರಿಯ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ ಎಂದು ಡಿಎಚ್ಓ ಮೋಹನ್ ತಿಳಿಸಿದ್ದಾರೆ.

Also Read  ಬೆಳ್ತಂಗಡಿ: ಜೈಲಿನಿಂದ ತಪ್ಪಿಸಿಕೊಂಡ ಪೋಕ್ಸೋ ಪ್ರಕರಣದ ಆರೋಪಿ ➤ ಪತ್ತೆಗೆ ಸಹಕರಿಸುವಂತೆ ಮನವಿ

 

error: Content is protected !!
Scroll to Top