ಬಜಾಲ್ ವಾರ್ಡಿನ ಅಭಿವೃದ್ದಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ.22, ಮಹಾನಗರ ಪಾಲಿಕೆಯ ಬಜಾಲ್ ವಾರ್ಡಿನ ಜಲ್ಲಿಗುಡ್ಡೆಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಿ.ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಶಾಸಕ ಕಾಮತ್, ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಕೋರ್ದಬ್ಬು ದೈವಸ್ಥಾನದಿಂದ ಮುಂದಕ್ಕೆ ರಸ್ತೆ ಅಭಿವೃದ್ಧಿಪಡಿಸುವ‌ ಕುರಿತು ಸ್ಥಳೀಯ ಮುಖಂಡರ ಮೂಲಕ ಇಲ್ಲಿನ ಸಾರ್ವಜನಿಕರು ಮನವಿ ಸಲ್ಲಿಸಿದ್ದರು. ಹಾಗಾಗಿ 7 ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿಯ ಗುದ್ದಲಿಪೂಜೆ ಸಾರ್ವಜನಿಕರ ಸಮ್ಮುಖದಲ್ಲಿ ನೆರವೇರಿಸಲಾಯಿತು. ಕಳೆದ 2 ವರ್ಷದಲ್ಲಿ ಬಜಾಲ್ ವಾರ್ಡಿನ ಅಭಿವೃದ್ಧಿಗೆ ಕೋಟಿಗೂ ಅಧಿಕ ಅನುದಾನ ಬಿಡುಗಡೆಗೊಳಿಸಲಾಗಿದ್ದು, ಸಾರ್ವಜನಿಕರ ಬೇಡಿಕೆಯ ಕಾಮಗಾರಿಗಳಿಗೆ ವಿವಿಧ ಇಲಾಖೆಗಳಿಂದ ಅನುದಾನ ಜೋಡಿಸಿ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ. ಈ ಕಾಮಗಾರಿಯೂ ಶೀಘ್ರವೇ ಪೂರ್ಣಗೊಳಿಸಲು ಗುತ್ತಿಗೆದಾರರಿಗೂ ಅಧಿಕಾರಿಗಳಿಗೂ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

Also Read  ಕುಂತೂರು: ಅಂಗಡಿಗೆಂದು ತೆರಳಿದ್ದ ಯುವತಿ ನಾಪತ್ತೆ

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಸ್ಥಳೀಯ ಸದಸ್ಯರಾದ ಅಶ್ರಫ್, ಬಿಜೆಪಿ ಮುಖಂಡರಾದ ಚಂದ್ರಶೇಖರ್ ಜಯನಗರ, ಶಿವಾಜಿ ರಾವ್, ವೇಣುಗೋಪಾಲ್, ಪುಷ್ಪರಾಜ್, ಚರಿತ್ ಪೂಜಾರಿ, ಮಾಧವ, ವಿನಿತ್, ಗಣೇಶ್, ಸ್ಥಳೀಯರಾದ ಹನೀಫ್, ಉಸ್ಮಾನ್ ಹಾಗೂ ಇತರರು ಉಪಸ್ಥಿತರಿದ್ದರು.

error: Content is protected !!
Scroll to Top