ರಾಜ್ಯದಲ್ಲಿಂದು 249 ಮಂದಿಗೆ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 9,399ಕ್ಕೆ ಏರಿಕೆ

ಬೆಂಗಳೂರು, ಜೂ.22: ರಾಜ್ಯದಲ್ಲಿಂದು 249 ಮಂದಿಗೆ ಕೊರೋನ ಸೋಂಕು ದೃಢವಾಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 9,399ಕ್ಕೆ ಏರಿಕೆಯಾಗಿದೆ. ಇದುವರೆಗೆ 5,730 ಮಂದಿ ಸೋಂಕಿತರು ಗುಣಮುಖರಾಗಿದ್ದು, ಸದ್ಯ ರಾಜ್ಯದಲ್ಲಿ 3,523 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರು ನಗರದಲ್ಲಿ ಇಂದು 126 ಜನರಿಗೆ ಸೋಂಕು ದೃಢವಾಗಿದೆ. ಕಲಬುರಗಿಯಲ್ಲಿ 27, ವಿಜಯಪುರದಲ್ಲಿ 15, ಉಡುಪಿಯಲ್ಲಿ 14, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12, ದಾವಣಗೆರೆಯಲ್ಲಿ 9, ಉತ್ತರ ಕನ್ನಡ ಮತ್ತು ಬಾಗಲಕೋಟೆಯಲ್ಲಿ 6, ಬೀದರ್ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ತಲಾ 5, ಧಾರವಾಡ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತಲಾ 4, ರಾಮನಗರ ಜಿಲ್ಲೆಯಲ್ಲಿ 3, ಚಿತ್ರದುರ್ಗ, ಕೋಲಾರ, ತುಮಕೂರು, ಕೊಡಗು ಜಿಲ್ಲೆಗಳಲ್ಲಿ ತಲಾ 2, ಯಾದಗಿರಿ, ಮೈಸೂರು, ಚಿಕ್ಕಬಳ್ಳಾಪುರ, ಗದಗ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ತಲಾ ಓರ್ವರಿಗೆ ಕೋವಿಡ್ ಸೋಂಕು ಪತ್ತೆಯಾಗಿದೆ.

Also Read  ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಸಿವಿಲ್ ಕೇಸ್ ದಾಖಲು

ಇಂದು ಐವರು ಸೋಂಕಿತರು ಮರಣ ಹೊಂದಿದ್ದು, ಸೋಂಕಿನ ಕಾರಣದಿಂದ ಮೃತಪಟ್ಟವರ ಸಂಖ್ಯೆ 142ಕ್ಕೆ ಏರಿಕೆಯಾಗಿದೆ.

error: Content is protected !!
Scroll to Top