ಅನಾರೋಗ್ಯಕ್ಕೆ ತುತ್ತಾಗಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮೃತ್ಯು



(ನ್ಯೂಸ್ ಕಡಬ)newskadaba.com ವಿಟ್ಲ, ಜೂ.22, ಅನಾರೋಗ್ಯದಿಂದ ಬಳಲುತ್ತಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ವಿಟ್ಲ ಪಡ್ನೂರು ಗ್ರಾಮ ಕೋಡಪದವು ಮಾಳ ಎಂಬಲ್ಲಿ ನಡೆದಿದೆ.






ಮೃತರನ್ನು ಕೋಡಪದವು ನಿವಾಸಿ ನಾರಾಯಣ ಎಂಬವರ ಪುತ್ರ ಭುವನೇಶ್ (16) ಎಂದು ಗುರುತಿಸಲಾಗಿದೆ. ಈತ ವಿಟ್ಲದ ಖಾಸಗಿ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯಾಗಿದ್ದಾನೆ. ಭುವನೇಶ್  ಸುಮಾರು 6 ತಿಂಗಳ ಹಿಂದಿನಿಂದ ಫಿಟ್ಸ್ ಖಾಯಿಲೆಯಿಂದ ಬಳಲುತ್ತಿದ್ದು, ಮನೆಯಲ್ಲಿ  ಫಿಟ್ಸ್ ನಿಂದ ಬಿದ್ದು ನರಳುತ್ತಿದ್ದ ಈತನನ್ನು   ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅದಾಗಲೇ ಮೃತಪಟ್ಟಿದ್ದ ಎನ್ನಲಾಗಿದೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top