ಕಡಬ: ಬೈಕ್ ಗಳ ನಡುವೆ ಢಿಕ್ಕಿ ➤ ಗಾಯಾಳು ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜೂ.23. ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳದ ಕೋಡಂದೂರು ಎಂಬಲ್ಲಿ ಸೋಮವಾರ ಬೆಳಿಗ್ಗೆ ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿತ್ತು. ಗಂಭೀರ ಗಾಯಗೊಂಡಿದ್ದ ಕಡಬ ತಾಲೂಕು ಬಂಟ್ರ ಗ್ರಾಮದ ಪಣೆಬೈಲು ನಿವಾಸಿ ಯತೀಂದ್ರ ರೈ ಎಂಬವರ ಪುತ್ರ ಪ್ರಮೋದ್ ರೈ ಎಂಬವರನ್ನು 108 ಆಂಬ್ಯುಲೆನ್ಸ್ ಮೂಲಕ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ ಕರೆದೊಯ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಾಳು ಪ್ರಮೋದ್ ರವರು ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Scroll to Top