(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜೂ.23,. ಕಾನ್‌ಸ್ಟೇಬಲ್‌ನಿಂದಾಗಿ ಒಂದೇ ಮನೆಯ ನಾಲ್ವರಿಗೆ ಕೊರೋನಾ ಸೋಂಕು ಸೋಮವಾರ ದೃಢಪಟ್ಟಿದೆ.
ಪತ್ನಿ ಹಾಗೂ ಮಗುವನ್ನು ನೋಡಿಕೊಂಡು ಬರಲು ಮಾವನ ಮನೆಗೆ ಬಂದಿದ್ದ ಕಾನ್‌ಸ್ಟೇಬಲ್‌ನಿಂದಾಗಿ ಆತನ ಕುಟುಂಬದ ಐದು ತಿಂಗಳ ಮಗು ಸೇರಿ ಪತ್ನಿ, ಅತ್ತೆ ಮತ್ತು ಮಾವನಿಗೂ ಕೊರೋನಾ ದೃಢಪಟ್ಟಿದೆ.
ಬೆಂಗಳೂರಿನ ಠಾಣೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾನ್‌ಸ್ಟೇಬಲ್ ಇತ್ತೀಚೆಗೆ ತಮ್ಮ ಪತ್ನಿಯ ಹೆರಿಗೆಗೆಂದು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ನಾರಾಯಣಪುರಕ್ಕೆ ಬಂದು ಹೋಗಿದ್ದರು. ಬೆಂಗಳೂರಿಗೆ ತೆರಳಿದಾಗ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಆತನ ಟ್ರಾವೆಲ್ ಹಿಸ್ಟರಿ ಪರಿಶೀಲಿಸಿದಾಗ ನಾರಾಯಣಪುರಕ್ಕೆ ಬಂದು ಹೋಗಿದ್ದು ತಿಳಿದು ಮನೆಯವರೆಲ್ಲ ಗಂಟಲು ದ್ರವ, ರಕ್ತ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ್ದಾರೆ. ಇದೀಗ ಬಂದ ವರದಿಯಲ್ಲಿ ಕುಟುಂಬದ ನಾಲ್ವರಿಗೆ ಸೋಂಕು ದೃಢಪಟ್ಟಿದೆ.