ತನ್ನ ಪತ್ನಿ ಮತ್ತು ಮಗಳಿಗೆ ಕೊರೋನಾ ಸೋಂಕು ದೃಢ..!!! ➤ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಟ್ವೀಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.23,. ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅವರ ಪತ್ನಿ ಹಾಗೂ ಮಗಳಿಗೂ ಕೊರೊನಾ ವೈರಸ್‌‌ ಸೋಂಕು ಇರುವುದು ದೃಢಪಟ್ಟಿದೆ. ಈ ಕುರಿತು ಸಚಿವ ಸುಧಾಕರ್‌ ಅವರು ಟ್ವಿಟರ್‌ನಲ್ಲಿ ಮಾಹಿತಿ ಖಚಿತಪಡಿಸಿದ್ದಾರೆ.


ಸುಧಾಕರ್ ಅವರ 82 ವರ್ಷ ತಂದೆಯ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಧಾಕರ್ ಅವರ ತಂದೆಯ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷಿಸಿದಾಗ ಅವರಿಗೂ ಸೋಂಕು ತಗುಲಿರುವುದು ದೃಢವಾಗಿದ್ದು. ಅವರ ಮನೆ ಕೆಲಸದವರಿಗೂ ಸೋಂಕು ದೃಢಪಟ್ಟಿದೆ.

Also Read  ಸರ್ಕಾರಕ್ಕೆ ನೂರು ದಿನಗಳ ಸಂಭ್ರಮ- ದೇಶಕ್ಕೆ ಮಾದರಿ ಈ ಪಂಚ ಗ್ಯಾರಂಟಿ


ಇನ್ನು ಮನೆಯವರೆಲ್ಲರ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು ಪತ್ನಿ ಮತ್ತು ಮಗಳಿಗೆ ಸೋಂಕು ದೃಢಪಟ್ಟಿದ್ದು, ನಾನು ಮತ್ತು ನನ್ನ ಇಬ್ಬರು ಗಂಡು ಮಕ್ಕಳ ವರದಿ ನೆಗೆಟಿವ್ ಬಂದಿದೆ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

error: Content is protected !!
Scroll to Top