ತುರ್ತು ಸೇವೆಗೆ ಸನ್ನದ್ಧರಾಗಿ ➤ ಡಾ. ವೀರೇಂದ್ರ ಹೆಗ್ಗಡೆಯವರಿಂದ ಕಿವಿಮಾತು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜೂ.23:  ಸರಕಾರ ವಿಪತ್ತು ನಿರ್ವಹಣೆಗೆ ಎಂದೂ ಸನ್ನದ್ಧವಾಗಿದೆ. ಆದರೆ ಪ್ರಜೆಗಳಲ್ಲಿ ಸೇವಾ ಮನೋಭಾವ ಬೆಳೆಯಬೇಕಿರುವುದು ಮುಖ್ಯ. ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್‌ಕೆಡಿಆರ್‌ಡಿಪಿ)ಯು ಸ್ವಯಂ ಸೇವಕರ ತಂಡವನ್ನು ರಚಿಸಿ ವಿಪತ್ತು ನಿರ್ವಹಣೆಯ ಹೊಣೆಗಾರಿಕೆ ವಹಿಸಲಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

 

 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಸರಕಾರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕದ ಸಹಭಾಗಿತ್ವದಲ್ಲಿ ಧರ್ಮಸ್ಥಳದಲ್ಲಿ ಸೋಮವಾರ ಆಯೋಜಿಸಿದ ಸ್ವಯಂ ಸೇವಕರ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿಪತ್ತಿನ ಸಂದರ್ಭದಲ್ಲಿ ಸ್ವಯಂ ಸೇವಕರು ವೈಜ್ಞಾನಿಕವಾಗಿ ತೊಡಗಿಸಿಕೊಂಡು ಸ್ವಯಂ ಸ್ಫೂರ್ತಿಯಿಂದ ರಕ್ಷಣಾ ಕಾರ್ಯಕ್ಕೆ ಸದಾ ಬದ್ಧರಾಗಿರಬೇಕು. ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಜತೆಗೆ ಇತರರ ರಕ್ಷಣೆಗೆ ಧಾವಿಸಬೇಕು. ಸ್ವಯಂ ಸೇವಕರಿಗೆ ರಕ್ಷಣಾ ಪರಿಕರಗಳ ಸಮರ್ಪಕ ಬಳಕೆ ವಿಚಾರದಲ್ಲಿ ಮಾಹಿತಿ ನೀಡಲಾಗುವುದು. ತರಬೇತಿ ಪಡೆದ ಬಳಿಕ ಸ್ವಯಂ ಸೇವಕರು ತಮ್ಮ ಮನೆಮಂದಿ ಹಾಗೂ ಸಮಾಜದ ಬಂಧುಗಳಿಗೆ ವಿಪತ್ತು ನಿರ್ವಹಣೆ ಮಾಹಿತಿ, ಮಾರ್ಗದರ್ಶನ ನೀಡಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು.

Also Read  33 ಕೊಲೆ ಪ್ರಕರಣ ಆರೋಪಿಗೆ 1,310 ವರ್ಷ ಜೈಲುಶಿಕ್ಷೆ

 

error: Content is protected !!
Scroll to Top