ಉಡುಪಿ: ಕೋವಿಡ್ ಲ್ಯಾಬ್ ಶೀಘ್ರ ಕಾರ್ಯ ಆರಂಭ

(ನ್ಯೂಸ್ ಕಡಬ) newskadaba.com ಉಡುಪಿ,ಜೂ.24:   ಗಂಟಲು ದ್ರವ ಪರೀಕ್ಷೆಗಾಗಿ ಎಲ್ಲ ಜಿಲ್ಲೆಗಳಲ್ಲಿಯೂ ಕೋವಿಡ್ ಲ್ಯಾಬ್ ತೆರೆಯಲು ಕ್ರಮ ಕೈಗೊಳ್ಳಲಾಗುತ್ತಿದೆ. ಉಡುಪಿಯಲ್ಲಿ ನಾಲ್ಕೈದು ದಿನಗಳಲ್ಲಿ ಲ್ಯಾಬ್ ಕಾರ್ಯಾರಂಭಿಸಲಿದೆ ಎಂದು ಮುಜರಾಯಿ ಹಾಗೂ ಮೀನುಗಾರಿಕಾ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಪುರಸಭೆ ಕಚೇರಿಯಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರೋಗ್ಯ ಇಲಾಖೆ ಹಾಗೂ ಪರಿಣಿತರು ಸೋಂಕು ಪ್ರಮಾಣ ಹೆಚ್ಚಾದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆ ನೀಡುತ್ತಿದ್ದು, ಸರ್ಕಾರ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಸೌಲಭ್ಯಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುತ್ತಿದೆ ಎಂದರು.

Also Read  ಕಮಿಷನರೇಟ್ ವ್ಯಾಪ್ತಿಯಲ್ಲಿ 162 ಡ್ರಗ್ ವ್ಯಸನಿಗಳಿಗೆ ಕೌನ್ಸೆಲಿಂಗ್- ಆಯುಕ್ತರಿಂದ ಮಾಹಿತಿ

error: Content is protected !!
Scroll to Top