(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.24,. ಬೇಧಿಯ ಕಾರಣದಿಂದ 8 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಉಳ್ಳಾಲದ ಅಝಾದ್ ನಗರದ ಮಹಿಳೆಗೆ ಕೊರೊನಾ ಪಾಸಿಟಿವ್ ಆಗಿದ್ದು ಆಸ್ಪತ್ರೆಯಲ್ಲಿದ್ದ ಸಿಬ್ಬಂದಿಗಳಿಗೆ ಹಾಗೂ ಇತರ ರೋಗಿಗಳಿಗೆ ಭೀತಿ ಉಂಟಾಗಿದೆ.
ಉಳ್ಳಾಲದ ಅಝಾದ್ ನಗರದ 57 ವರ್ಷದ ಮಹಿಳೆಯನ್ನು ಬೇಧಿಯ ಕಾರಣದಿಂದ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 8 ದಿನಗಳ ಕಾಲ ಅವರು ಅಲ್ಲಿಯೇ ಚಿಕಿತ್ಸೆ ಪಡೆದಿದ್ದರು. ನಂತರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಪಾಸಿಟಿವ್ ಬಂದಿದ್ದು ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ.
ಇದೀಗ ಮಹಿಳೆ 8 ದಿನಗಳ ಕಾಲ ಚಿಕಿತ್ಸೆ ಪಡೆದ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಯ ಸಿಬ್ಬಂದಿಗಳಿಗೂ ಕೊರೊನಾ ಭೀತಿ ಉಂಟಾಗಿದ್ದು ಮಹಿಳೆಗೆ ಚಿಕಿತ್ಸೆ ನೀಡಿದ ಸಿಬ್ಬಂದಿ ಸೇರಿದಂತೆ ಆಸ್ಪತ್ರೆಯ ಹಲವು ಮಂದಿಯ ಗಂಟಲ ದ್ರವ ಪರೀಕ್ಷೆ ನಡೆಯಲಿದೆ. ಹಾಗೆಯೇ ಇವರನ್ನು ಕ್ವಾರಂಟೈನ್‌ಗೆ ಒಳಪಡಿಸುವ ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಈ ಮಹಿಳೆಗೆ ಕೊರೊನಾ ಹೇಗೆ ಬಂದಿದೆ ಎಂದು ಇನ್ನು ತಿಳಿದು ಬಂದಿಲ್ಲ.
ಮಹಿಳೆಗೆ ಕೊರೊನಾ ದೃಢಪಟ್ಟ ಕಾರಣದಿಂದ ಮಹಿಳೆ ವಾಸವಿದ್ದ ಮನೆ ಹಾಗೂ ಆ ಕೌಪೌಂಡ್‌ನಲ್ಲೇ ಇದ್ದ ಇನ್ನೊಂದು ಮನೆಯನ್ನು ಸೀಲ್‌ಡೌನ್ ಮಾಡಲಾಗಿದ್ದು ಮಹಿಳೆಯ ಮನೆಯ 15 ಮಂದಿ ಹಾಗೂ ನೆರೆಮನೆಯ 4 ಮಂದಿ ಸೇರಿ ಒಟ್ಟು 19 ಮಂದಿಯನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.