ಬೆಳ್ತಂಗಡಿ ಬಸ್ಸಿನಲ್ಲಿ ಹೃದಯಘಾತದಿಂದ ಮೃತಪಟ್ಟ ಬ್ಯಾಂಕ್ ಸಿಬ್ಬಂದಿ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ, ಜೂ.25: ಬ್ಯಾಂಕ್ ಸಿಬ್ಬಂದಿಯೊರ್ವರು ಕರ್ತವ್ಯಕ್ಕೆ ಬಸ್ಸಿನಲ್ಲಿ ತೆರಳುತ್ತಿದ್ದಾಗ ಹೃದಯಘಾತದಿಂದ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕು ರಾಮಲ್‍ಕಟ್ಟೆ ನಿವಾಸಿ ಚನಿಯ ನಾಯ್ಕ್(57) ಎಂದು ಗುರುತಿಸಲಾಗಿದೆ.


ಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದರ ಸೀನಿಯರ್ ಅಸಿಸ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಎಂದಿನಂತೆ ಮನೆಯಿಂದ ಹೊರಟು ಬಸ್ಸಿನಲ್ಲಿ ಬರುತ್ತಿದ್ದಾಗ ತೀವ್ರ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾದರು ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅದಾಗಲೇ ಅವರು ಅಸುನೀಗಿದ್ದರು.


ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.ಮೃತರ ಮನೆಗೆ ಬೆಳ್ತಂಗಡಿ ಎಸ್.ಬಿ.ಐ ಮ್ಯಾನೇಜರ್ ಅರವಿಂದ್ ನಾಯಕ್ ಮತ್ತು ಸಿಬ್ಬಂದಿ ಭೇಟಿ ನೀಡಿ ಸಾಂತ್ವನ ಹೇಳಿದರು.

Also Read  ಕೆಎಸ್ಸಾರ್ಟಿಸಿ ಬಸ್ ಹಾಗೂ ಪಿಕಪ್ ನಡುವೆ ಢಿಕ್ಕಿ - ಪಿಕಪ್ ಚಾಲಕ ಮೃತ್ಯು

error: Content is protected !!
Scroll to Top