?? ?ig Breaking News ದ.ಕ ಜಿಲ್ಲೆಯ ಐವರು ವೈದ್ಯರಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ.25, ಐವರು ವೈದ್ಯರಿಗೆ ಕೊರೋನಾ ದೃಢಪಟ್ಟ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ನಗರದ ಎರಡು ಸರಕಾರಿ ಆಸ್ಪತ್ರೆಗಳ ಮೂವರು, ಖಾಸಗಿ ಆಸ್ಪತ್ರೆಯ ಇಬ್ಬರು ವೈದ್ಯರಿಗೆ ಕೊರೋನಾ ದೃಢಪಟ್ಟಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಇವರ ಸಂಪರ್ಕದಲ್ಲಿದ್ದ 30 ವೈದ್ಯರನ್ನು ಕ್ವಾರಂಟೈನ್ ಗೊಳಪಡಿಸಲಾಗಿದೆ.

ವೈದ್ಯರು ಪಿಪಿಇ ಕಿಟ್ ಧರಿಸಿ ಸಾಕಷ್ಟು ಸುರಕ್ಷಾ ನಿಯಮ ಪಾಲಿಸಿದ್ದರೂ ಸಹ ಅವರಿಗೆ ಕೊರೋನಾ ದೃಢಪಟ್ಟಿದ್ದು, ಇದನ್ನು ಸಾರ್ವಜನಿಕರು ಗಂಭೀರವಾಗಿ ಪರಿಗಣಿಸಬೇಕಾಗಿದ್ದು, ನಿರ್ಲಕ್ಷ್ಯ ವಹಿಸಿದರೆ ಸಾಮುದಾಯಿಕವಾಗಿ ಹರಡುವ ಸಾಧ್ಯತೆಯಿದೆ. ಆದುದರಿಂದ ಈ ಘಟನೆ ಸಾರ್ವಜನಿಕರ ಪಾಲಿಗೆ ಎಚ್ಚರಿಕೆಯ ಕರೆಗಂಟೆಯಾಗಿ ಸ್ವೀಕರಿಸಬೇಕಿದೆ.

Also Read  ಬ್ರಹ್ಮ ಶ್ರೀ ನಾರಾಯಣ ಗುರು ನಿಗಮ ಸ್ಥಾಪನೆ ➤ ಶ್ರೀನಿವಾಸ ಪೂಜಾರಿ

error: Content is protected !!
Scroll to Top