ಮಗನೊಂದಿಗೆ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ವೇಳೆ ಶಿಕ್ಷಕ ಮೃತ್ಯು

(ನ್ಯೂಸ್ ಕಡಬ)newskadaba.com ರಾಯಚೂರು, ಜೂ.25, ಬೈಕ್ ಢಿಕ್ಕಿ ಹೊಡೆದು ಶಿಕ್ಷಕನೋರ್ವ ಮೃತಪಟ್ಟ ಘಟನೆ ಜಿಲ್ಲೆಯ ದೇವದುರ್ಗ ತಾಲೂಕು ಸಮೀಪದ ಮಿಯ್ಯಾಪುರ ಕ್ರಾಸ್ ನಲ್ಲಿ ಗರುರುವಾರದಂದು ನಡೆದಿದೆ.

ಮೃತರನ್ನು ಸುಂಕೇಶ್ವರಹಾಳ ಸರಕಾರಿ ಪ್ರೌಢಶಾಲಾ ಶಿಕ್ಷಕ ನಾಗರೆಡ್ಡಿ ಎಂದು ಗುರುತಿಸಲಾಗಿದೆ. ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಬೇಕಾಗಿದ್ದ ತನ್ನ ಪುತ್ರನನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಲು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ರಸ್ತೆಗೆ ನುಗ್ಗಿದ ಎಮ್ಮೆಗೆ ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ.ಗಾಯಗೊಂಡಿರುವ ಮಗನನ್ನು ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವದುರ್ಗ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Scroll to Top