ನೀರಿನಲ್ಲಿ ಮುಳುಗಿ ಬಾಲಕರಿಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ನಾಗಮಂಗಲ, ಜೂ.26, ಹಸುವನ್ನು ತೊಳೆಯಲೆಂದು ಕೆರೆಗೆ ಇಳಿದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಾಗಮಂಗಲ ಎಂಬಲ್ಲಿ ನಡೆದಿದೆ.

ಮೃತರನ್ನು ಪುನೀತ್ (7) ಹಾಗೂ ಮನು (13) ಎಂದು ಗುರುತಿಸಲಾಗಿದೆ. ಮೂವರು ಬಾಲಕರಲ್ಲಿ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಹಸುವನ್ನು ತೊಳೆಯಲು ಹೋದ ಸಂದರ್ಭ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್, ಬೆಳ್ಳೂರು ಠಾಣಾ ಪೋಲಿಸರು ಭೇಟಿ ನೀಡಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

Scroll to Top