(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.26. ದ.ಕ. ಜಿಲ್ಲಾ ಗೃಹರಕ್ಷಕ ದಳದ ಬಂಟ್ವಾಳ ಘಟಕದಲ್ಲಿ ವನಮಹೋತ್ಸವ ಆಚರಣೆ ಮತ್ತು ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳನ್ನು ಶುಕ್ರವಾರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀಮೋಹನ ಚೂಂತಾರು ರವರು ಮಾತನಾಡಿ ಈ ಮಾತ್ರೆ ಕೊರೋನಾ ವೈರಸ್‍ನಿಂದ ನಮಗೆ ರಕ್ಷಣೆಯನ್ನು ನೀಡುವ ಉದ್ದೇಶದಿಂದ ಇದನ್ನು ವಿತರಿಸಲಾಗಿದೆ. ಗೃಹರಕ್ಷಕರೆಲ್ಲ ಕೊರೋನಾ ಮಹಾಮಾರಿಯಿಂದ ತಮ್ಮನ್ನು ತಾವು ರಕ್ಷಿಸಿಕೊಂಡು ಸಮಾಜವನ್ನು ರಕ್ಷಿಸುವ ಜವಾಬ್ದಾರಿಯ ಕರ್ತವ್ಯ ನಿಮ್ಮದಾಗಿರುತ್ತದೆ ಎಂದು ಕರೆ ನೀಡಿದರು. ಜಿಲ್ಲೆಯ ಗೃಹರಕ್ಷಕರ ಮೇಲಿನ ಕಾಳಜಿಯಿಂದ ಸರ್ಕಾರದ ವತಿಯಿಂದ ಉಚಿತವಾಗಿ ಔಷಧವನ್ನು ಕೊಡುತ್ತಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ ರೋಗ ಜಾಸ್ತಿಯಾಗುತ್ತಿರುವುದರಿಂದ ಗೃಹರಕ್ಷಕರೆಲ್ಲಾ ಕರ್ತವ್ಯದ ಸಮಯದಲ್ಲಿ ಮುಖಕವಚ ಮತ್ತು ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸಿಕೊಂಡು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು ಎಂದು ಗೃಹರಕ್ಷಕರಿಗೆ ಕಿವಿಮಾತು ಹೇಳಿದರು.
ಇದೇ ಸಂದರ್ಭದಲ್ಲಿ ವನಮಹೋತ್ಸವ ಅಂಗವಾಗಿ ಗಿಡವನ್ನು ನೆಟ್ಟು ವನಮಹೋತ್ಸವ ಆಚರಣೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಬಂಟ್ವಾಳ ಘಟಕದ ಘಟಕಾಧಿಕಾರಿ ಶ್ರೀ ಐತ್ತಪ್ಪ ಹಾಗೂ ಎಲ್ಲಾ ಗೃಹರಕ್ಷಕ/ಗೃಹರಕ್ಷಕಿಯರು ಉಪಸ್ಥಿತರಿದ್ದರು.