ಕರಾವಳಿ ಮೀನುಗಾರಿಕೆ ➤ ಜೂನ್ 30ರಂದು ಸಭೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ. 26, ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಜೂನ್ 30 ರಂದು ಬೆಳಿಗ್ಗೆ 10.30 ಗಂಟೆಗೆ ಮಂಗಳೂರು ಮಹಾನಗರಪಾಲಿಕೆ ಮಂಗಳಾ ಸಭಾಂಗಣದಲ್ಲಿ ಸಭೆಯನ್ನು ಏರ್ಪಡಿಸಲಾಗಿದೆ.

ಸಭೆಯಲ್ಲಿ ಕರಾವಳಿ ಮೀನುಗಾರಿಕೆ ಬಗ್ಗೆ ಹಾಗೂ ಭವಿಷ್ಯದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಕರಾವಳಿ ಭಾಗದ ಶಾಸಕರು, ವಿಷಯ ತಜ್ಞರು, ಮೀನುಗಾರ ಮುಖಂಡರು, ಇಲಾಖೆಯ ನಿವೃತ್ತ ಅಧಿಕಾರಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಯಲಿದೆ ಎಂದು ಮೀನುಗಾರಿಕಾ ಇಲಾಖೆ ಪ್ರಕಟಣೆ ತಿಳಿಸಿದೆ.

Also Read  ಕಡಬ: ಕೆಲಸಕ್ಕೆಂದು ತೆರಳಿದ ಯುವಕ ನಾಪತ್ತೆ

error: Content is protected !!
Scroll to Top