ದ.ಕ ಜಿಲ್ಲೆಯಲ್ಲಿಂದು 35 ಮಂದಿಯಲ್ಲಿ ಕೊರೋನಾ ಸೋಂಕು ದೃಢ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ.26, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 35 ಮಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಿನ್ನೆಯೂ ಜಿಲ್ಲೆಯಲ್ಲಿ 29 ಮಂದಿಯಲ್ಲಿ ಸೋಂಕು ದೃಢಪಟ್ಟಿತ್ತು. ನಿನ್ನೆ ಐವರು ವೈದ್ಯ ವಿದ್ಯಾರ್ಥಿಗಳಲ್ಲೂ ಸೋಂಕು ಕಾಣಿಸಿಕೊಂಡಿದ್ದು, ಅವರನ್ನು ಕೋವಿಡ್ ಆಸ್ಪತ್ರೆಯಲ್ಲಿ ನಿಗಾದಲ್ಲಿರಿಸಿ ಅವರು ವಾಸ್ತವ್ಯವಿದ್ದ ಫ್ಲ್ಯಾಟ್ ಅನ್ನು ಸೀಲ್ ಡೌನ್ ಮಾಡಲಾಗಿದೆ.

Scroll to Top