ಕಮಿಷನರ್ ಕಛೇರಿಗೂ ವಕ್ಕರಿಸಿದ ಕೊರೋನಾ ➤ ಬೆಂಗಳೂರು ನಗರ ಪೊಲೀಸ್‌ ಆಯುಕ್ತರ ಕಛೇರಿ 3 ದಿನ ಸೀಲ್‌ಡೌನ್‌

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.26. ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಗೆ ಕೊರೊನಾ ಸೋಂಕು ಬಂದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತರ ಕಚೇರಿಯನ್ನು ಸೀಲ್‌ಡೌನ್‌ ಮಾಡಲಾಗಿದೆ.

ಇಲ್ಲಿಯವರೆಗೆ 92ಕ್ಕೂ ಹೆಚ್ಚು ಪೊಲೀಸರಿಗೆ ಕೊರೊನಾ ಮಹಾಮಾರಿ ಆವರಿಸಿದ್ದು, 15 ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಸೋಂಕಿತರೊಂದಿಗೆ ಪ್ರಥಮ ಹಾಗೂ ದ್ವಿತೀಯ ಸಂಪರ್ಕ ದಲ್ಲಿದ್ದ ಸುಮಾರು 870 ಮಂದಿ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ. ಪೊಲೀಸ್ ಕಮಿಷನರ್ ಕಚೇರಿಯನ್ನು ಇಂದಿನಿಂದ ಮೂರು ದಿನಗಳ ಕಾಲ ಸೀಲ್‌ಡೌನ್‌ ಮಾಡಲಾಗಿದೆ.

Scroll to Top