ಕರಾವಳಿಯಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.27:  ಕಳೆದ ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಭಾರತೀಯ ಹವಾಮಾನ ಇಲಾಖೆಯು “ಆರೆಂಜ್‌ ಅಲರ್ಟ್‌’ ಘೋಷಣೆ ಮಾಡಿದೆ.

 

ಈ ವೇಳೆ ಕರಾವಳಿ ಭಾಗದಲ್ಲಿ 115.6 ಮಿ.ಮೀ. ನಿಂದ 204.4 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ.ಮಂಗಳೂರು ನಗರದಲ್ಲಿ ಶುಕ್ರವಾರದಂದು ಬಿಸಿಲು ಮತ್ತು ಸೆಕೆಯಿಂದ ಕೂಡಿದ ವಾತಾವರಣ ಇತ್ತು. ರಾತ್ರಿ ಭಾರೀ ಮಳೆಯಾಗಿದ್ದು ರಸ್ತೆಯಲ್ಲಿ ನೀರು ನಿಂತ ಕಾರಣ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

Also Read  ಕಾಳಿ ನದಿಗೆ ಬಿದ್ದ ಲಾರಿ- ಸತತ ಪ್ರಯತ್ನದ ಮೂಲಕ ಸಫಲ

error: Content is protected !!
Scroll to Top