ಪುತ್ತೂರು; ಕಾನೂನು ಮಹಾವಿದ್ಯಾಲಯದಲ್ಲಿ ಕಳವಿಗೆ ಯತ್ನ

(ನ್ಯೂಸ್ ಕಡಬ) newskadaba.com ಪುತ್ತೂರು,ಜೂ.27: ನೆಹರು ನಗರ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಛೇರಿ ಮತ್ತು ಪ್ರಾಂಶುಪಾಲ ಕೊಠಡಿ ಬೀಗ ಮುರಿದು ಕಳ್ಳರು ಒಳನುಗ್ಗಿ ಕಳವಿಗೆ ಯತ್ನಿಸಿದ ಘಟನೆ ಶುಕ್ರವಾರ ದಂದು ಬೆಳಕಿಗೆ ಬಂದಿದೆ.

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಛೇರಿಯ ಬೀಗ ಮುರಿಯಲೆತ್ನಿಸಿದ ಕಳ್ಳರು ಪ್ರಾಶುಂಪಾಲರ ಕೊಠಡಿಯ ಬೀಗ ಮುರಿದು ಕಪಾಟಿನೊಳಗಿದ್ದ ದಾಖಲೆಪತ್ರಗಳನ್ನು ಚೆಲ್ಲಾಪಿಲ್ಲಿ ಮಾಡಿ ಕಳವಿಗೆ ಯತ್ನಿಸಿದ್ದಾರೆ. ಕಾಲೇಜಿನ ಸಿಬ್ಬಂದಿಗಳು ಎಂದಿನಂತೆ ಶುಕ್ರವಾರ ಬೆಳಿಗ್ಗೆ ಕಚೇರಿಗೆ ಆಗಮಿಸಿದ ವೇಳೆ ಕಳವಿಗೆ ಯತ್ನಿಸಿದ ವಿಚಾರ ಬೆಳಕಿಗೆ ಬಂದಿದೆ. ಘಟನೆ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top