ಪಾಕ್ ನಿಂದ ಮತ್ತೆ ಕದನ ವಿರಾಮ – ಗುಂಡಿನ ದಾಳಿಗೆ ಗಾಯಗೊಂಡ ಯುವತಿ

(ನ್ಯೂಸ್ ಕಡಬ)newskadaba.com ಪೂಂಚ್, ಜೂ. 27. ಪಾಕಿಸ್ತಾನ ಸೇನೆಯು ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಪಾಕ್‌ನ ಗುಂಡಿನ ದಾಳಿಗೆ 18 ವರ್ಷದ ಯುವತಿಯೊಬ್ಬರ ಎದೆ ಭಾಗಕ್ಕೆ ಗುಂಡು ತಗುಲಿ ಗಾಯವಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಜಮ್ಮು ಕಾಶ್ಮೀರದ ಪೂಂಚ್‌ ಜಿಲ್ಲೆಯ ಜಿಲ್ಲಾಧಿಕಾರಿ ರಾಹುಲ್ ಯಾದವ್‌, ಜಿಲ್ಲೆಯ ಕೇರನಿ ಸೆಕ್ಟರ್‌ನ ಗಡಿ ಭಾಗದಲ್ಲಿ ಪಾಕಿಸ್ತಾನವು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು, 18 ವರ್ಷದ ಯುವತಿಯ ಎದೆ ಭಾಗಕ್ಕೆ ಗುಂಡು ತಗುಲಿ ಗಾಯವಾಗಿದೆ. ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಇನ್ನು ಯುವತಿಯ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ವೈದ್ಯರು, ಯುವತಿಯ ಆರೋಗ್ಯ ಸ್ಥಿರವಾಗಿದೆ. ಗುಂಡು ದೇಹದಲ್ಲಿರುವುದು ಎಕ್ಸ್‌ ರೇ ವರದಿಯಿಂದ ತಿಳಿದು ಬಂದಿದ್ದು ಶಸ್ತ್ರಚಿಕಿತ್ಸೆ ನಡೆಸಬೇಕಾಗಿದೆ. ಸದ್ಯ ಡ್ರೆಸ್ಸಿಂಗ್ ಮಾಡಲಾಗಿದ್ದು ಶಸ್ತ್ರಚಿಕಿತ್ಸೆಗೆ ರಕ್ತವನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

Also Read  ಭಾರೀ ಮಳೆಗೆ 2 ಕಿ.ಮೀ. ಕೊಚ್ಚಿ ಹೋದ 91ರ ವೃದ್ಧೆ..!

 

error: Content is protected !!
Scroll to Top