ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಉಪ್ಪಡ್ ಪಚ್ಚಿಲ್ ಆಯನೊ’ ಕಾರ್ಯಕ್ರಮ

(ನ್ಯೂಸ್ ಕಡಬ)newskadaba.com ಬಂಟ್ವಾಳ , ಜೂ.27, ಹಲಸಿನ ಹಣ್ಣಿನಲ್ಲಿ ಅಪಾರ ಪ್ರೋಟಿನ್ ಅಂಶಗಳಿವೆ. ರೋಗ ನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು.

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಉಪ್ಪಡ್ ಪಚ್ಚಿಲ್ ಆಯನೊ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಆಹಾರ ಸಂಸ್ಕೃತಿಯನ್ನು ಉಳಿಸಲು ಇಂಥ ಕಾರ್ಯಕ್ರಮಗಳು ನಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಸಾಲ್ಯಾನ್, ಉಪಾಧ್ಯಕ್ಷ ನಾರಾಯಣ ಗೌಡ, ಆಡಳಿತ ಮಂಡಳಿ ಸದಸ್ಯರಾದ ಆರ್ ಚೆನ್ನಪ್ಪ ಕೋಟ್ಯಾನ್, ಹೊಯ್ಸಳ ರಾಷ್ಟ್ರ ಸೇವಿಕಾ ಸಮಿತಿಯ ಪ್ರಾಂತ ಕಾರ್ಯಕಾರಿಣಿ ಸದಸ್ಯೆ ಕಮಲ ಪ್ರಭಾಕರ್ ಭಟ್, ಶಾಲಾಭಿವೃದ್ದಿ ಸಮಿತಿ ಸದಸ್ಯರಾದ ಜಯರಾಮ, ಪದ್ಮನಾಭ, ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿ ಸದಸ್ಯರಾದ ಲಕ್ಷ್ಮೀ ರಘುರಾಜ್, ಮಲ್ಲಿಕಾ ಶೆಟ್ಟಿ, ಶ್ರೀರಾಮ ವಿದ್ಯಾಕೇಂದ್ರದ ಕೋಶಾಧಿಕಾರಿ ಶಿವಗಿರಿ ಸತೀಶ್ ಭಟ್, ಶಾಲಾ ಮುಖ್ಯ ಶಿಕ್ಷಕ ರವಿರಾಜ್ ಕಣಂತೂರು, ಮಾತೃ ಭಾರತೀಯ ಪದಾಧಿಕಾರಿಗಳಾದ ಸೌಮ್ಯ, ಬೇಬಿ, ರಾಜಶ್ರೀ ಮೊದಲಾದವರು ಭಾಗವಹಿಸಿದ್ದರು.

Also Read  ಸವಣೂರು: ಮುಗೇರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಜಾತ್ರೋತ್ಸವ

error: Content is protected !!
Scroll to Top