ದಿನೇ ದಿನೇ ಏರಿಕೆಯಾಗುತ್ತಿರುವ ಪೆಟ್ರೋಲ್, ಡೀಸೆಲ್ ದರ ➤ ಜೂ.29ರಂದು ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ)newskadaba.com ಕಡಬ, ಜೂ.27. ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಕುಸಿದಿದ್ದರೂ, ಕೇಂದ್ರ ಸರ್ಕಾರವು ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಯನ್ನು ದಿನೇ ದಿನೇ ಗಗನಕ್ಕೆ ಏರಿಸಿ ಬಡ ಸಾಮಾನ್ಯ ಜನರ ಜೀವನದಲ್ಲಿ ಚೆಲ್ಲಾಟವಾಡುತ್ತಿರುವುದನ್ನು ಖಂಡಿಸಿ ಜೂನ್ 29 ರಂದು ಕಡಬ ತಹಶೀಲ್ದಾರ್ ಕಛೇರಿಯ ಮುಂಭಾಗದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಲಿದೆ.

ಕಡಬ ಕಾಂಗ್ರೆಸ್ ಕಛೇರಿಯಲ್ಲಿ‌ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಕೈಕುರೆ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಪಿ ವರ್ಗೀಸ್, ಅಚ್ಚೇದಿನ್ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿ.ಜೆ.ಪಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಅನೈತಿಕತೆಯಿಂದ ಹುಟ್ಟಿದ ರಾಜ್ಯ ಸರಕಾರ ಇಂತಹ ಸಂಕಷ್ಟದ ಸಮಯದಲ್ಲಿ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಜನರಿಂದ ಹಣ ಲೂಟಿ ಹೊಡೆಯುತ್ತಿದೆ. ಹಿಂದಿನ ಯುಪಿಯ ಸರಕಾರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಹೆಚ್ಚಾಗಿದ್ದರೂ ಅದನ್ನು ಸರಿದೂಗಿಸುವ ಕೆಲಸ ಆಗಿದೆ. ಆದರೆ ಆಗ ಬೊಬ್ಬೆ ಹೊಡೆದ ದೇಶ ಭಕ್ತರು, ಬಿ.ಜೆ.ಪಿ ನಾಯಕರು ಈಗ ಎಲ್ಲಿದ್ದಾರೆ? ಈ ಬಗ್ಗೆ ಪ್ರಧಾನಿ ಯಾಕೆ ತುಟಿ ಬಿಚ್ಚುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Also Read  ಗಣರಾಜ್ಯೋತ್ಸವ - ಪೂರ್ವಭಾವಿ ಸಭೆ

ಪತ್ರಿಕಾಗೋಷ್ಠಿಯಲ್ಲಿ ತಾ.ಪಂ.ಸದಸ್ಯ ಫಝಲ್ ಕೋಡಿಂಬಾಳ, ಪ್ರಮುಖರಾದ ಸೈಮನ್ ಸಿ.ಜೆ., ಹಾಜಿ ಕೆ.ಎಂ. ಹನೀಫ್, ಅಶ್ರಫ್ ಶೇಡಿಗುಂಡಿ, ನೀಲಾವತಿ ಶಿವರಾಂ, ಫೈಝಲ್ ಕಡಬ ಮೊದಲಾದವರು ಉಪಸ್ಥಿತರಿದ್ದರು.

error: Content is protected !!
Scroll to Top