(ನ್ಯೂಸ್ ಕಡಬ)newskadaba.com ಪುತ್ತೂರು, ಜೂ.27, ಇಲ್ಲಿನ ಸರಕಾರಿ ಆಸ್ಪತ್ರೆಯ ಗುತ್ತಿಗೆ ನೌಕರೆ ಹಾಗೂ ಎರಡು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದ ಇಬ್ಬರ ಸಹಿತ ತಾಲೂಕಿನ ನಾಲ್ವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ‘ಡಿ’ ಗ್ರೂಪ್ ನೌಕರರಾಗಿದ್ದು, ಅಡುಗೆ ಕೆಲಸ ನಿರ್ವಹಿಸುತ್ತಿದ್ದ ಮಹಿಳೆ ಹಾಗೂ ಎರಡು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದ ಬಜತ್ತೂರಿನ 80ರ ವೃದ್ಧೆ, ಬಪ್ಪಳಿಗೆಯ 20 ವರ್ಷದ ಯುವಕ ಮತ್ತು 32 ವರ್ಷ ಪ್ರಾಯದ ಕೂರ್ನಡ್ಕದ ಮಹಿಳೆಯೊಬ್ಬರಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.
Also Read ➤➤ ಉದ್ಯೋಗ ಮಾಹಿತಿ ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ