ಪ್ರತೀ ರವಿವಾರ ಲಾಕ್ ಡೌನ್ ಘೋಷಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ.27, ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಮತ್ತೆ ಭಾನುವಾರ ಲಾಕ್​ಡೌನ್ ಮಾಡಲು ನಿರ್ಧರಿಸಿದೆ.

 

ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಬಿಎಸ್​ ಯಡಿಯೂರಪ್ಪ ನಿವಾಸದಲ್ಲಿ ನಡೆದ ಸಭೆಯಲ್ಲಿ ಮತ್ತೆ ಪ್ರತೀ ಭಾನುವಾರ ಲಾಕ್​ಡೌನ್​ ಜಾರಿ ಮಾಡಲು ತೀರ್ಮಾನಿಸಲಾಗಿದೆ. ಮುಂದಿನ ಅಂದರೆ ಜುಲೈ 5 ರಿಂದ ಮುಂದಿನ ಪ್ರತೀ ಭಾನುವಾರವೂ ಕಂಪ್ಲೀಟ್ ಲಾಕ್​ಡೌನ್​ ಆಗಲಿದೆ. ಜುಲೈ 5ರಿಂದ ಮುಂದಿನ ಆದೇಶದವರೆಗೆ ಪ್ರತಿ ಭಾನುವಾರ ರಾಜ್ಯಾದ್ಯಂತ ಲಾಕ್‍ಡೌನ್ ಮಾಡಲಾಗುವುದು.
ಜುಲೈ 10 ರಿಂದ ಒಂದು ತಿಂಗಳ ಕಾಲ ಈಗಾಗಲೇ ರಜೆಯಿರುವ 2ನೇ ಹಾಗೂ 4ನೇ ಶನಿವಾರದ ಜೊತೆಗೆ ಉಳಿದ ಶನಿವಾರದಂದು ಎಲ್ಲಾ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯಕ್ಕೊಳಪಡುವ ಎಲ್ಲಾ ಕಚೇರಿಗಳಿಗೆ ರಜೆ ಘೋಷಣೆ, ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ.

Also Read  ಖಾಸಗಿ ಬಸ್ - ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ➤ ಲಾರಿ ಚಾಲಕ ಸಜೀವ ದಹನ | ವಾಹನಗಳೆರಡೂ ಸುಟ್ಟು ಭಸ್ಮ

ಬೆಂಗಳೂರಿನಲ್ಲಿರುವ ಬೃಹತ್ ಹೋಲ್‍ಸೇಲ್ ತರಕಾರಿ ಮಾರುಕಟ್ಟೆಗಳಲ್ಲಿ ಆಗುವ ಜನದಟ್ಟಣೆಯನ್ನು ತಪ್ಪಿಸುವ ಉದ್ದೇಶದಿಂದ ಹೆಚ್ಚಿನ ಹೋಲ್‍ಸೇಲ್ ತರಕಾರಿ ಮಾರುಕಟ್ಟೆಗಳನ್ನು ತೆರೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ಸೂಚನೆ ನೀಡಿದೆ. ಕೋವಿಡ್-19 ಸೋಂಕಿತ ರೋಗಿಗಳನ್ನು ಶೀಘ್ರವಾಗಿ ಕೋವಿಡ್ ಆಸ್ಪತ್ರೆಗಳಿಗೆ ಸೇರಿಸಲು ತಂತ್ರಾಂಶದ ಮೂಲಕ ಜಾರಿ. ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತ ವ್ಯಕ್ತಿಗಳನ್ನು ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್ ಸಂಖ್ಯೆಗಳನ್ನು 250ಕ್ಕೆ ಹೆಚ್ಚಿಸಲು ಮತ್ತು ಕೋವಿಡ್‍ನಿಂದ ಮೃತರಾದ ದೇಹಗಳನ್ನು ಸಾಗಿಸಲು ಪ್ರತ್ಯೇಕ ಅಂಬ್ಯುಲೆನ್ಸ್​ ವ್ಯವಸ್ಥೆಯನ್ನೂ ಕೂಡಾ ಮಾಡಲಾಗಿದೆ.

error: Content is protected !!
Scroll to Top