(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.28: ದ.ಕ ಜಿಲ್ಲೆಯಲ್ಲಿ ಕೊರೊನಾಗೆ ಇಂದು ಮತ್ತಿಬ್ಬರ ಬಲಿಯಾಗಿದೆ. ಇದರೊಂದಿಗೆ ದ.ಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 12ಕ್ಕೇರಿದೆ.
ಬಂಟ್ವಾಳ ಸಮೀಪದ ಲೊರೆಟ್ಟೊಪದವಿನ 58 ವರ್ಷದ ಪ್ರಾಯದ ಮಹಿಳೆ ಹಾಗೂ ಸುರತ್ಕಲ್‍ನ ಇಡ್ಯಾ ನಿವಾಸಿ 31 ವರ್ಷದ ಯುವಕ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.
ಮೃತಪಟ್ಟ ಮಹಿಳೆಯು ಕಳೆದೊಂದು ವಾರದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಹಾಗೂ ಯುವನಿಗೆ ಜ್ವರದಿಂದಾಗಿ ಆಸ್ಪತ್ರೆಗೆ ತೆರಳಿ ತಪಾಸಣೆಗೊಳಪಡಿಸುವಾಗ ಕೊರೊನಾ ದೃಢಪಟ್ಟಿತ್ತು ನಂತರ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಇಂದು ಇಬ್ಬರು ಕೂಡ ಮೃತಪಟ್ಟಿದ್ದಾರೆ .