ಶನಿವಾರ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಯ ಮನೆಯವರಿಗೆ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಉಡುಪಿ ,ಜೂ.28:  ಸರಕಾರ ನೂರಾರು ಸುರಕ್ಷಿತ ಕ್ರಮಗಳನ್ನ ಕೈಗೊಂಡು ಎಸ್ ಎಸ್ ಎಲ್ ಸಿ ಪರೀಕ್ಷೆ ಯನ್ನ ನಡೆಸಿದೆ. ಕೊರೋನಾ ಆತಂಕದ ನಡುವೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದರ, ನಡುವೆ.ಶನಿವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಯ ಮನೆಯವರಿಗೆ ಕೊರೊನಾ ಪಾಸಿಟಿವ್‌ ಆಗಿದ್ದು ವಿದ್ಯಾರ್ಥಿಯ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

 

ಪಡುಬಿದ್ರೆಯ ಒಂದು ಪರೀಕ್ಷಾ ಕೆಂದ್ರದಲ್ಲಿ ಈ ವಿದ್ಯಾರ್ಥಿ ಪರೀಕ್ಷೆ ಬರೆದಿದ್ದು ಶನಿವಾರ ವಿದ್ಯಾರ್ಥಿಯ ಮನೆಯವರಿಗೆ ಕೊರೊನಾ ದೃಢಪಟ್ಟ ಹಿನ್ನಲೆ ವಿದ್ಯಾರ್ಥಿಯ ಗಂಟಲ ದ್ರವದ ಮಾದರಿಯನ್ನು ಕೊರೊನಾ ಪರೀಕ್ಷೆಗೆ ಕಳುಹಿಸಲಾಗಿದ್ದು ಸೋಮವಾರದ ಒಳಗಾಗಿ ವರದಿ ಬಾರದಿದ್ದಲ್ಲಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ತಿಳಿದು ಬಂದಿದೆ. ಹಾಗೆಯೇ ವರದಿಯು ನೆಗೆಟಿವ್‌ ಬಂದಲ್ಲಿ ವಿದ್ಯಾರ್ಥಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ತಿಳಿದು ಬಂದಿದೆ.

Also Read  ಕಡಬ ಸರಸ್ವತಿ ವಿದ್ಯಾಲಯ: ಪ್ರೌಢಶಾಲೆಯಲ್ಲಿ ಗುರುಪೂರ್ಣಿಮೆ ಆಚರಣೆ

error: Content is protected !!
Scroll to Top